ಉಡುಪಿ: 'ಜಗತ್ತು ವೇಗವಾಗಿ, ಆಕರ್ಷಕವಾಗಿ ಬೆಳೆಯುತ್ತಿದೆ. ವಿದ್ಯಾರ್ಥಿಗಳು ಮೋಹಕ್ಕೆ ಒಳಗಾಗದೆ ಚಿತ್ತವನ್ನು ನಿಗ್ರಹಿಸಿಕೊಂಡು, ಸಮಯವನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣವನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದು ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಅವರು ಆಶೀರ್ವಚನ ನೀ ಡಿದರು.

ಕೋಟ ಪಡುಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಾಜೇಂದ್ರ ನಾಯಕ್ ಮಾತನಾಡಿ, ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕ ಸಮಾಜ ನಿರ್ಮಿಸುವಲ್ಲಿ ಸಂಸ್ಥೆಯ ಪಾತ್ರ ಬಹಳ ದೊಡ್ಡದು ಎಂದರು.

ಪ್ರಾಂಶುಪಾಲ ಚಂದ್ರಕಾಂತ್ ಭಟ್, ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ರಾಘವೇಂದ್ರ ಎಲ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ವಿನಾಯಕ್ ಪೈ ಬಿ, ಪ್ರಜ್ಞಾ ಮಾರ್ಪಳ್ಳಿ, ಗಗನ್ ಕೆ. ಸುವರ್ಣ, ಧೀರಜ್, ಖುಷಿ ಶೆಟ್ಟಿ, ಉಜ್ವಲ್ ನಾಯಕ್ ಭಾಗವಹಿಸಿದ್ದರು.

ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಎ.ಟಿ. ಪ್ರಶಾಂತ್ ಹೊಳ್ಳ ಸ್ವಾಗತಿಸಿದರು. ವಿನಾಯಕ್ ಪೈ ಬಿ. ವಂದಿಸಿದರು. ರಾನಿಯಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-28-548538191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.