ಉಡುಪಿ: ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವಕರು ತಮ್ಮ ಚಿಂತನೆ, ಪ್ರತಿಭೆ ಮತ್ತು ಸೃಜನಶೀಲತೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಹೇಳಿದರು.

ನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು ವತಿಯಿಂದ ಈಚೆಗೆ ನಡೆದ ‘ಬಿಯಾಂಡ್ ದಿ ಸ್ಕ್ರೋಲ್’ ಅಂತರ ಕಾಲೇಜು ಉತ್ಸವವನ್ನು ಎಂ.ಜಿ.ಎಂ ಕಾಲೇಜ್ ಕ್ಯಾಂಪಸ್ನ ಟಿ.ಎಂ.ಎ. ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯಕ್ರಮಕ್ಕೆ ಸೀಮಿತವಾಗದೇ, ಪಠ್ಯೇತರ ವೇದಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕು ಎಂದರು.

ಮಣಿಪಾಲದ ಎಜಿಇ ಆಡಳಿತಾಧಿಕಾರಿ ಕೆ. ಶ್ರೀಧರ್ ಆರ್. ಪೈ ಭಾಗವಹಿಸಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ಎಸ್. ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲೆ ವನಿತಾ ಮಯ್ಯ ಮತ್ತು ಎಂ.ಜಿ.ಎಂ. ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಎಂ.ಜಿ.ಎಂ ಪದವಿ ಕಾಲೇಜಿನ ಉಪಪ್ರಾಂಶುಪಾಲ ಎಂ. ವಿಶ್ವನಾಥ್ ಪೈ, ಮಲ್ಲಿಕಾ ಎ. ಶೆಟ್ಟಿ, ಯಾಸಿನ್ ಮನ್ನಾ, ನಂದನ್ ಕುಂದರ್, ಧೀರಜ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-28-1851614021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.