ಉಳ್ಳಾಲ: ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ಕಿನ್ಯದ ಆಶ್ರಯದಲ್ಲಿ ಎಸ್ಎಸ್ಎಲ್ಸಿ ನಂತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ, ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ಶಿಕ್ಷಣ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಿನ್ಯ ಗ್ರಾಮದ ಉಕ್ಕುಡದಲ್ಲಿ ನಡೆಯಿತು.

ಕುನಿಲ್ ಇಲ್ಡ್ ಅಕಾಡೆಮಿ ಉಪಾಧ್ಯಕ್ಷ ಪಿ.ಎಸ್. ಮೊಯ್ದಿನ್ ಕಾರ್ಯಕ್ರಮ ಉದ್ಘಾಟಿಸಿದರು. ಅಳೇಕಲ ಮದನಿ ಪಿ.ಯು ಕಾಲೇಜು ಪ್ರಾಂಶುಪಾಲ ಅಬ್ದುಲ್ ಅಝೀಝ್ ಮಾಹಿತಿ ನೀಡಿದರು. ಕಿನ್ಯ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಶುಭಾ ಅವರು ಶಾಲೆಯ ಚಟುವಟಿಕೆ ಕುರಿತು ಮಾಹಿತಿ ನೀಡಿದರು.

ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಆರಿಫ್ ಕಿನ್ಯ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಅನುಗ್ರಹ ಇನ್ಸ್ಟಿಟ್ಯೂಷನ್ ನಿರ್ದೇಶಕ ಮೊಹಮ್ಮದ್ ತೌಸೀಫ್ ಕಕ್ಕಿಂಜೆ, ಅಬ್ದುಲ್ ಖಾದರ್ ನಾವೂರ್ ಶೈಕ್ಷಣಿಕ ಕಾರ್ಯಾಗಾರ ನಡೆಸಿದರು.

ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ, ನಿವೃತ್ತ ಹಿರಿಯ ಶಿಕ್ಷಕ ಮೊಹಮ್ಮದ್ ಮಾಸ್ಟರ್ ಕಲ್ಕಟ್ಟ, ಕುನಿಲ್ ಇಲ್ಡ್ ಅಕಾಡೆಮಿ ಉಪಾಧ್ಯಕ್ಷ ಪಿ.ಎಸ್. ಮೊಯ್ದಿನ್, ಲೆಕ್ಕ ಪರಿಶೋಧಕ ಅಬ್ದುಲ್ ಫವಾಝ್ ಕಿನ್ಯ ಅವರನ್ನು ಸನ್ಮಾನಿಸಲಾಯಿತು. ಅರ್ಹ ಫಲಾನುಭವಿಗಳಿಗೆ ಅಲ್ ಅಮೀನ್ ವಿದ್ಯಾರ್ಥಿವೇತನ ನೀಡಲಾಯಿತು. ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಅಳೇಕಲ ಮದನಿ ಪಿ.ಯು ಕಾಲೇಜು ಪ್ರಾಂಶುಪಾಲ ಅಬ್ದುಲ್ ಅಝೀಝ್, ಕಿನ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬೂಸಾಲಿ ಕಿನ್ಯ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್, ಸಲಫಿ ಜುಮಾ ಮಸೀದಿ ಅಧ್ಯಕ್ಷ ಎನ್.ಕೆ. ಮೊಹಮ್ಮದ್, ಉದ್ಯಮಿ ಮುಸಾ, ಕಿನ್ಯ ಮಜಲ್ ಮಸೀದಿ ಅಧ್ಯಕ್ಷ ಅಬೂಬಕ್ಕರ್, ಕೆಡಿಪಿ ಸದಸ್ಯ ಹಮೀದ್ ಕಿನ್ಯ ಭಾಗವಹಿಸಿದ್ದರು.

ಶಿಯಾನ್ ಮೊಯ್ದಿನ್ ಕಿರಾಅತ್ ಪಠಿಸಿದರು. ಅಬ್ಬಾಸ್ ಕಿನ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಮ್ತಿಯಾಝ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-1218583990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.