ಉಳ್ಳಾಲ: ಯಾವುದೇ ಕಲೆ ಸಿದ್ಧಿಯಾಗಬೇಕಾದರೆ ಪರಿಶ್ರಮದೊಂದಿಗೆ ಕಲಾಸಕ್ತಿಯೂ ಮುಖ್ಯ. ಭರತನಾಟ್ಯ ಕಲೆ ಶ್ರೇಷ್ಠ ಕಲೆಯಾಗಿದ್ದು, ಅದರ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸುವ ಜಬಾಬ್ದಾರಿ ನಮ್ಮೆಲ್ಲರಿಗೂ ಇದೆ ಎಂದು ಉಳ್ಳಾಲ ಮೋಹನ್ ಕುಮಾರ್ ಹೇಳಿದರು.

ಅಸೈಗೋಳಿಯಲ್ಲಿ ನಡೆದ ದುರ್ಗಾ ಸ್ವಾತಿ ನೃತ್ಯಾಲಯದ ‘ಸಾಧನಾ -2026’ 12ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ವಹಿಸಿ, ಭಾರತೀಯ ಸಂಸ್ಕೃತಿಯು ಶ್ರೀಮಂತ ಸಂಸ್ಕೃತಿಯಾಗಿದೆ. ಭರತನಾಟ್ಯ, ಯಕ್ಷಗಾನದಂಥ ಕಲೆಗಳು ನಮ್ಮ ನಾಡಿನ ಶ್ರೇಷ್ಠತೆಗೆ ಕಾರಣವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್, ರಾಜಶ್ರೀ ಉಳ್ಳಾಲ ವಿದ್ವಾನ್ ಪ್ರಮೋದ್ ಉಳ್ಳಾಲ್ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಪುಣ್ಯಕೋಟಿ ಶಾರದಾ ಗಣಪತಿ ವಿದ್ಯಾ ಸಂಸ್ಥೆಯ ಸಂಚಾಲಕ ಟಿ.ಜಿ.ರಾಜಾರಾಂ ಭಟ್, ಬಂಟರ ಸಂಘದ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್, ಮುಡಿಪು ಕುಲಾಲ ಸಂಘದ ಅಧ್ಯಕ್ಷರಾದ ಪುಂಡರೀಕಾಕ್ಷ ಕುಲಾಲ್, ಪ್ರವೀಣ್ ಕುಂಪಲ, ಯುವ ಉದ್ಯಮಿ ಕಿರಣ್ ಕುಮಾರ್, ಉದ್ಯಮಿ ಚಂದ್ರಶೇಖರ್ ಮಂಟಮೆ ಭಾಗವಹಿಸಿದ್ದರು. ನೃತ್ಯಗುರು ವಿದುಷಿ ಸ್ವಾತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವಸ್ತಿಕಾ ಸ್ವಾಗತಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಪ್ರಭು ವಂದಿಸಿದರು.ಬಳಿಕವಿದ್ಯಾರ್ಥಿಗಳಿಂದ ಭರತನಾಟ್ಯ ಹಾಗೂ ನೃತ್ಯರೂಪಕ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-29-270977468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.