ಉಪ್ಪಿನಬೆಟಗೇರಿ: ’ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿ ಅನೇಕ ಸೌಲಭ್ಯಗಳು ನೀಡಲಾಗುತ್ತಿದೆ. ಪಾಲಕರು ಮಕ್ಕಳನ್ನು ಶಾಲೆಗೆ ದಾಖಲಿಸಬೇಕು’ ಎಂದು ಬೈಲಹೊಂಗಲ ಸಕ್ಕರೆ ಕಾರ್ಖಾನೆ ನಿರ್ದೇಶಕ ಮಲ್ಲಣ್ಣ ಅಷ್ಟಗಿ ಹೇಳಿದರು.

ಇಲ್ಲಿನ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆಡಳಿತ ಸೋಮವಾರ ಏರ್ಪಡಿಸಿದ್ದ ’ಶಾಲಾ ಪ್ರಾರಂಭೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಿಡಿಒ ಮಧುಸೂಧನ ದೇಶಪಾಂಡೆ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವಿದ್ಯಾವಂತ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, ಗುಣಮಟ್ಟದ ಶಿಕ್ಷಣ ದೊರಕುತ್ತದೆ ಎಂದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ನಿಜಗುಣಿ ಹೂಲಿ, ಪ್ರವೀಣ ಓಂಕಾರಿ ಮುಖ್ಯ ಶಿಕ್ಷಕ ಎಫ್.ಎಚ್.ಕಾಲೆಕಾನವರ ಮಾತನಾಡಿದರು.

ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ, ಸಮವಸ್ತ್ರ ನೀಡಲಾಯಿತು. ಎಸ್.ಡಿ.ಎಂ.ಸಿ.ಯ ನಾಗಪ್ಪ ದಿವಟಗಿ, ಗಂಗಪ್ಪ ತಳವಾರ, ರಮೇಶ ಹಳಮನಿ, ಮಾಬೂಸಬಾನಿ ನದಾಫ್ ,ಶಿಕ್ಷಕರಾದ ಸಂತೋಷ ನಾಯ್ಕರ, ಜಿ.ಎಸ್.ಬಡಸದ, ಜಿ.ಎಸ್.ಚವಾಣ, ಎ.ಎಂ.ಮೆಣಸಗಿ, ನೀಲಮ್ಮ ಬಂಗಡಿ, ದ್ರಾಕ್ಷಾಯಿಣಿ ಹಡಪದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-1942473073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.