ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC/KPSC Exam: ಬಹು ಆಯ್ಕೆಯ ಪ್ರಶ್ನೆಗಳು

ಹನುಮಾನಾಯಕ್‌ ರಾಥೋಡ್‌
Published 10 ಏಪ್ರಿಲ್ 2024, 22:49 IST
Last Updated 10 ಏಪ್ರಿಲ್ 2024, 22:49 IST
ಅಕ್ಷರ ಗಾತ್ರ

1. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ರಾಜ್ಯದಲ್ಲಿ ಒಟ್ಟು 5 ಹುಲಿ ಸಂರಕ್ಷಣಾ ಪ್ರದೇಶಗಳಲ್ಲಿವೆ.

ಬಿ. ರಾಷ್ಟ್ರದಲ್ಲಿಯೇ ಅತಿ ಹೆಚ್ಚಿನ ಹುಲಿಗಳಿರುವ ರಾಜ್ಯಗಳ ಪೈಕಿ ಮಧ್ಯಪ್ರದೇಶ ಎರಡನೇಯ ಸ್ಥಾನದಲ್ಲಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

⇒ಉತ್ತರ : ಎ

2. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ರಾಜ್ಯವು 5 ರಾಷ್ಟ್ರೀಯ ಉದ್ಯಾನಗಳು, 36 ಅಭಯಾರಣ್ಯಗಳು ಮತ್ತು 5 ಹುಲಿ ಸಂರಕ್ಷಿತ ಪ್ರದೇಶಗಳನ್ನು ಹೊಂದಿದೆ.

ಬಿ. ರಾಜ್ಯವು 17 ಸಂರಕ್ಷಣಾ ಮೀಸಲು ಪ್ರದೇಶಗಳು ಮತ್ತು 1 ಸಮುದಾಯ ಮೀಸಲು ಪ್ರದೇಶವನ್ನು ಹೊಂದಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

⇒ಉತ್ತರ: ಡಿ

3. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 2023ನೇ ಸಾಲಿನಲ್ಲಿ ಕೈಗೊಂಡ ಆನೆ ಗಣತಿಯ ಪ್ರಕಾರ ಕರ್ನಾಟಕ ರಾಜ್ಯವು 6,395 ಆನೆಗಳನ್ನು ಹೊಂದಿದೆ.

ಬಿ. 2023ನೇ ಸಾಲಿನಲ್ಲಿ ಕೈಗೊಂಡ ಆನೆ ಗಣತಿಯ ಪ್ರಕಾರ ದೇಶದ ಒಟ್ಟು ಆನೆಗಳ ಶೇ 25ರಷ್ಟು ಮಧ್ಯಪ್ರದೇಶದಲ್ಲಿ ಕಂಡುಬರುತ್ತವೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.

⇒ಉತ್ತರ : ಎ

4. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 2022ನೇ ಸಾಲಿನ ಹುಲಿ ಗಣತಿ ಪ್ರಕಾರ ಮಧ್ಯ ಭಾರತ ಮತ್ತು ಶಿವಾಲಿಕ್ ಬೆಟ್ಟಗಳು ಮತ್ತು ಗಂಗಾ ಬಯಲು ಪ್ರದೇಶಗಳಲ್ಲಿ ಹುಲಿಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.

ಬಿ. 2022ನೇ ಸಾಲಿನ ಹುಲಿ ಗಣತಿ ಪ್ರಕಾರ ಪಶ್ಚಿಮ ಘಟ್ಟದ ಕೆಲವು ಪ್ರದೇಶಗಳಲ್ಲಿ ಸ್ಥಳೀಯವಾಗಿ ಹುಲಿಗಳ ಸಂಖ್ಯೆ ಕಡಿಮೆಯಾಗಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.

⇒ಉತ್ತರ : ಡಿ

5. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಜೈವಿಕ ವೈವಿಧ್ಯ ಅಧಿನಿಯಮ 2002ರ ಕಲಂ 22ರ ಪ್ರಕಾರ ಕರ್ನಾಟಕ ಜೀವ ವೈವಿಧ್ಯ ಮಂಡಳಿಯನ್ನು 2003ರಲ್ಲಿ ಸ್ಥಾಪಿಸಲಾಗಿದೆ.

ಬಿ. ಕರ್ನಾಟಕ ಜೀವ ವೈವಿಧ್ಯ ಮಂಡಳಿ ಕರ್ನಾಟಕದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ 5,654 ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳನ್ನು ರಚಿಸಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

⇒ಉತ್ತರ : ಎ

6. ಅಟಲ್ ಭೂಜಲ ಯೋಜನೆಗೆ ಸಂಬಂಧಿ ಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಇದು ಸಮುದಾಯ ಸಹಭಾಗಿತ್ವದಲ್ಲಿ ಸುಸ್ಥಿರ ಅಂತರ್ಜಲ ನಿರ್ವಹಣಾ ಯೋಜನೆಯಾಗಿದೆ.

ಬಿ. ಕೇಂದ್ರ ವಲಯ ಯೋಜನೆಯಾದ ಇದು 2020ರಿಂದ 2030ರವರೆಗೆ ಜಾರಿಯಲ್ಲಿರುತ್ತದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ : ಎ

7. ರಾಜ್ಯದ ನೀರಾವರಿ ಮೂಲಗಳಿಗೆ ಸಂಬಂಧಿಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ರಾಜ್ಯದ ಎಲ್ಲಾ ನೀರಾವರಿ ಮೂಲಗಳ ಪೈಕಿ ಕೊಳವೆ ಅಥವಾ ಕೊರೆದ ಬಾವಿಗಳಿಂದ ನೀರು ಪೂರೈಕೆ ಆಗಿರುವ ಪಾಲು ಅತ್ಯಧಿಕವಾಗಿದೆ.

ಬಿ. ಐತಿಹಾಸಿಕವಾಗಿ ಕೆರೆಗಳು ಪ್ರಮುಖ ನೀರಾವರಿ ಮೂಲವಾಗಿದ್ದರೂ ಸಹ ನಿವ್ವಳ ನೀರಾವರಿ ಕ್ಷೇತ್ರದಲ್ಲಿ ಕೆರೆಗಳ ಪಾಲು ಶೇ 2.07 ಆಗಿರುತ್ತದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ : ಡಿ

8. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತವನ್ನು 1998ರಲ್ಲಿ ಸ್ಥಾಪಿಸಲಾಗಿದೆ.

ಬಿ. ಕರ್ನಾಟಕ ನೀರಾವರಿ ನಿಗಮವನ್ನು 1996ರಲ್ಲಿ ಸ್ಥಾಪಿಸಲಾಗಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

⇒ಉತ್ತರ: ಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT