ಸೋಮವಾರ, ಮಾರ್ಚ್ 27, 2023
24 °C

UPSC | ಸೆಪ್ಟೆಂಬರ್‌ 16 ರಿಂದ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ)ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾತ್ರ ಮುಖ್ಯ ಪರೀಕ್ಷೆಯನ್ನು ಬರೆಯಬಹುದು. ಆಯ್ಕೆಯಾದ ಅಭ್ಯರ್ಥಿಗಳ ವಿವರ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಿದೆ.

ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯು ಸೆಪ್ಟೆಂಬರ್‌ 16 ರಿಂದ 25ರ(2022)ವರೆಗೆ ನಡೆಯಲಿದೆ. ಒಟ್ಟು 5 ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ದಿನಕ್ಕೆ 2 ಪತ್ರಿಕೆಗಳಿಗೆ ಉತ್ತರಿಸಬೇಕು ಎಂದು ಆಯೋಗ ತಿಳಿಸಿದೆ.

ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ upsc.gov.in ಗೆ ಭೇಟಿ ನೀಡಬಹುದು.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಮುಂದಿನ ಹಂತದಲ್ಲಿ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: www.upsc.gov.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು