ಗುರುವಾರ , ಅಕ್ಟೋಬರ್ 21, 2021
21 °C

ಕೇಂದ್ರ ಲೋಕಸೇವಾ ಆಯೋಗ: 'ಸಿಎಂಎಸ್' ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರ ಲೋಕಸೇವಾ ಆಯೋಗ ನಡೆಸುವ 'ಸಿಎಂಎಸ್' (combined medical services) ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. 

ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಯ ವೇಳಾಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗದ ವೆಬ್‌ಸೈಟ್‌ ಮೂಲಕವು ನೋಡಬಹುದು.

ಬರುವ ನವೆಂಬರ್ 21ರಂದು ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ಒಟ್ಟು 2 ಪತ್ರಿಕೆಗಳು ಇರಲಿವೆ. ಬೆಳಗ್ಗೆ ಜನರಲ್‌ ಮೆಡಿಸನ್‌ ಪತ್ರಿಕೆ ಹಾಗೂ ಮಧ್ಯಾಹ್ನ ಸರ್ಜರಿ ಪತ್ರಿಕೆಯ ಪರೀಕ್ಷೆ ನಡೆಯಲಿದೆ.  

ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಡ್ಮಿಟ್ ಕಾರ್ಡ್‌ ಹಾಗೂ ತಮ್ಮ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯೊಂದಿಗೆ ಪರೀಕ್ಷೆಗೆ ಹಾಜರಾಗಬೇಕು ಎಂದು ಕೇಂದ್ರ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹಾಗೂ ಪರೀಕ್ಷೆ ವೇಳಾಪಟ್ಟಿಗೆ   www.upsc.nic.in ವೆಬ್‌ಸೈಟ್‌ ನೋಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು