ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಅಮೇರಿಕದ ಯುನಿವರ್ಸಿಟಿ ಆಫ್ ಇಲಿನಾಯಿಸ್ ಚಿಕಾಗೊ ನಡುವೆ ಶೈಕ್ಷಣಿಕ ಒಡಂಬಡಿಕೆ ನಡೆದಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಇನಾಮದಾರ ಅವರು ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಇಲಿನಾಯಿಸ್ ವಿಶ್ವವಿದ್ಯಾಲಯ, ಚಿಕಾಗೊ ಅಂತರರಾಷ್ಟೀಯ ಆರೋಗ್ಯ ವಿಭಾಗದ ಅಸೋಸಿಯೇಟ್ ಡೀನ ಡಾ. ಪ್ರಭಾಕರ ಬೆಳ್ಳೂರ ಅವರೊಂದಿಗೆ ಈ ಒಡಂಬಡಿಕೆ ಕುರಿತು ಚರ್ಚಿಸಿದ್ದರು. ಈಗ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಈ ಒಡಂಬಡಿಕೆಯಿಂದಾಗಿ ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸಲಿವೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಸಚಿವ ಡಾ. ರಾಘವೇಂದ್ರ ಕುಲಕರ್ಣಿ ಹಾಗೂ ಡಾ. ತೇಜಸ್ವಿನಿ ವಲ್ಲಭ ಮಾರ್ಗದರ್ಶನದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಈ ಒಡಂಬಡಿಕೆ ಜಾರಿಗೆ ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-19-1671634712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.