ವಿಜಯಪುರ: 2026ನೇ ಸಾಲಿನ ಸಿಇಟಿ ಪ್ರವೇಶ ಪರೀಕ್ಷೆಗಳು ಏ.22ರಿಂದ 24ರ ವರೆಗೆ ಜಿಲ್ಲೆಯ 30 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, 13,359 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಮುಂಜಾಗ್ರತೆಯಿಂದ ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ವೀಕ್ಷಕರಂತೆ ಒಟ್ಟು 30 ವೀಕ್ಷಕರನ್ನು ನೇಮಿಸಿದೆ. ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾದ ವೀಕ್ಷಕರು ಪರೀಕ್ಷೆ ಪ್ರಾರಂಭವಾಗುವ ಸಮಯಕ್ಕಿಂತ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಉಪ ಮುಖ್ಯ ಅಧಿಕ್ಷಕರು, ಒಬ್ಬ ಪ್ರಶ್ನೆಪತ್ರಿಕೆ ಪಾಲಕರು ಹಾಗೂ ಒಬ್ಬ ವಿಶೇಷ ಸ್ಥಾನಿಕ ಜಾಗೃತದಳ ಸದಸ್ಯರನ್ನು ನೇಮಿಸಿದೆ. ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಆದೇಶಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಯಿತು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-26-954923321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.