ವಿಜಯಪುರ: ‘ಕಲಿಕೆಯಲ್ಲಿ ಕೇವಲ ಜ್ಞಾನ ಹೊಂದಿದ್ದರೆ ಸಾಲದು ಅದಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಕೌಶಲವನ್ನು ಹೊಂದಿರಬೇಕು’ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಭುವನ ಕೌಲಗಿ ಹೇಳಿದರು.

ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ಬೋಧನೆಯಲ್ಲಿ ಎಐ ಬಳಕೆಯ ಕುರಿತು ಉಪನ್ಯಾಸಕರಿಗಾಗಿ ಇತ್ತೀಚೆಗೆ ಆಯೋಜಿಸಲಾಗಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನುದ್ಧೇಶಿಸಿ ಮಾತನಾಡಿದರು.

‘ಪ್ರಸ್ತುತ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆಯ ಸಮರ್ಪಕ ಬಳಕೆಯನ್ನು ಅರಿತುಕೊಂಡಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಪರಿಣಾಮಕಾರಿಯಾಗಿ ಕಲಿಸಿಕೊಡುವುದಕ್ಕೆ ಸಾಧ್ಯವಾಗುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದಕ್ಕೆ ಸಾಧ್ಯವಾಗುತ್ತದೆ’ ಎಂದರು.

‘ಪ್ರಪಂಚ ನಿತ್ಯವೂ ಪರಿರ್ತನೆ ಹೊಂದುತ್ತ ಸಾಗುತ್ತಿದೆ. ಅದಕ್ಕೆ ಅನುಗುಣವಾಗಿ ಹೊಸ ಹೊಸ ತಂತ್ರಜ್ಞಾನಗಳು ಆವಿಷ್ಕಾರವಾಗುತ್ತಲಿವೆ. ಅದಕ್ಕೆ ತಕ್ಕಂತೆ ನಾವು ಕೂಡ ಬದಲಾಗುತ್ತಲೇ ಸಾಗಬೇಕು. ನೀಟ್, ಜೆಇಇ ಕುರಿತು ತರಬೇತಿ ನೀಡುವ ಸಂದರ್ಭದಲ್ಲಿ ಎಐ ಬಳಕೆ ಮಾಡಿಕೊಂಡಲ್ಲಿ ಕಲಿಕೆಯು ವೇಗವನ್ನು ಪಡೆದುಕೊಳ್ಳುತ್ತದೆ. ಮತ್ತು ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ವಿಷಯವನ್ನು ಕಡಿಮೆ ಸಮಯದಲ್ಲಿ ತಲುಪಿಸುವುದಕ್ಕೂ ಸಾಧ್ಯವಾಗುತ್ತದೆ’ ಎಂದರು.

ಬೆಂಗಳೂರಿನ ಎಐ ತರಬೇತುದಾರ ಆದಿತ್ಯಾ ಮಾಲೂರ ಮಾತನಾಡಿ, ‘ಕೃತಕ ಬುದ್ಧಿಮತ್ತೆ ಎಂಬುದು ಸರಿಯಾದ ಮಾರ್ಗದಲ್ಲಿ ಬಳಸಿಕೊಂಡರೆ ಅದು ಮನುಕುಲಕ್ಕೆ ಸಿಕ್ಕ ವರವಾಗುತ್ತದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರದಂತ ವಿಷಯಗಳನ್ನು ಬೋಧಿಸುವ ಸಂದರ್ಭದಲ್ಲಿ ಬಳಸಿಕೊಳ್ಳುವ ಎಐ ಟೂಲ್ಗಳು ನಮ್ಮ ಬೋಧನೆಯನ್ನು ಮತ್ತಷ್ಟು ಚುರುಕುಗೊಳಿಸುತ್ತವೆ. ಮಕ್ಕಳ ಗಮನವನ್ನು ಕೇಂದ್ರೀಕರಿಸುವುದರೊಂದಿಗೆ ಅವರು ಹೆಚ್ಚಿನ ಅಂಕಗಳನ್ನು ಪಡೆದುಕೊಳ್ಳುವುದಕ್ಕೆ ನೆರವಾಗುತ್ತದೆ’ ಎಂದರು.

ಕಾರ್ಯಾಗಾರದಲ್ಲಿ ಪ್ರಾಂಶುಪಾಲ ಮಂಜುನಾಥ ಮ. ಜುನಗೊಂಡ, ಶೈಕ್ಷಣಿಕ ಸಂಯೋಜಕ ಮಂಜುನಾಥ ತುಮ್ಮರಮಟ್ಟಿ ಸೇರಿದಂತೆ ಎಲ್ಲ ಉಪನ್ಯಾಸಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-26-748609494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.