ವಿಜಯಪುರ: ಕನ್ನಡ ನಾಡು-ನುಡಿ, ನೆಲ-ಜಲ, ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ಇನ್ನೂ ಹೆಮ್ಮರವಾಗಿ ಬೆಳೆಯಲಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಅಪ್ಸರಾಬೇಗಂ ಚಪ್ಪರಬಂದ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

1915ರಲ್ಲಿ ಸ್ಥಾಪನೆಯಾದ, ಶತಮಾನದಷ್ಟು ಹಳೆಯದಾದ ಈ ಸಂಸ್ಥೆ ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವಲ್ಲಿ ತನ್ನದೇಯಾದ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಹೇಳಿದರು.

ಸಾಹಿತ್ಯ ಚಟುವಟಿಕೆಯ ಜೊತೆಗೆ ನಾಡು ನುಡಿಯ ರಕ್ಷಣೆಗೆ ಸದಾ ಬದ್ಧವಾಗಿರುವ ಸಂಸ್ಥೆಯಾಗಿದೆ ಎಂದು ಅವರು ಅವರು ಪ್ರಶಂಸಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಮಾಧವ ಗುಡಿ ವಿಶೇಷ ಉಪನ್ಯಾಸ ನೀಡಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಅಭಿಷೇಕ ಚಕ್ರವರ್ತಿ, ಆಶಾ ಬಸನಗೌಡ ಬಿರಾದಾರ, ಚಂದ್ರಕಾಂತ ಡೊಣಗಿ, ಭಾಗೀರಥಿ ಸಿಂಧೆ, ವಿಜಯಲಕ್ಷ್ಮಿ ಹಳಕಟ್ಟಿ, ಮಹಾದೇವ ಮೋಪಗಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-1211427245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.