ವಿಜಯಪುರ: ನಾಗಠಾಣದ ಸರ್ಕಾರಿ ಶಾಲೆಯಲ್ಲಿ 2001 ರಿಂದ 2003 ನೇ ವರ್ಷದಲ್ಲಿ ಎಸ್ಎಸ್ಎಲ್ಸಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಪುನಃ ಸಮಾವೇಶಗೊಂಡು ಶಿಕ್ಷಕರಿಗೆ ಗುರುವಂದನೆ ಸಲ್ಲಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಅಕ್ಷರಗಳನ್ನು ಕಲಿಸುವ ಜೊತೆಗೆ ವಿದ್ಯಾರ್ಥಿಗಳ ನಡೆ-ನುಡಿಯನ್ನು ತಿದ್ದಿ ಜೀವನವನ್ನು ರೂಪಿಸಲು ಮಾರ್ಗದರ್ಶನ ಮಾಡಿದ ಅರಿವಿನ ಗುರುಗಳನ್ನು ವಿದ್ಯಾರ್ಥಿಗಳು ಪುಷ್ಪವೃಷ್ಟಿಗರೆದು ಕಾರ್ಯಕ್ರಮಕ್ಕೆ ಬರಮಾಡಿಕೊಂಡರು. ಅಗಲಿದ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕುರಿತು ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಿವೃತ್ತ ಉಪನ್ಯಾಸಕಿ ಎಂ.ಎಂ.ಬಿರಾದಾರ ಮಾತನಾಡಿ, ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಿಸಬೇಕು ಎಂದರು.

ನಿವೃತ್ತ ಮುಖ್ಯ ಶಿಕ್ಷಕ ವಿ.ಎಸ್. ನಾಯಕ್ ಮಾತನಾಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜೊತೆಗೆ ಅವರಿಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಸಾಧನೆ ಮಾಡಲು ನೆರವಾಗಬೇಕು ಎಂದರು.

ಉಪನ್ಯಾಸಕಿ ಜಿ.ಬಿ.ಕಟ್ಟಿ, ಸಿ.ಎ.ರುದ್ರಗೌಡ, ಎಸ್.ಎಂ.ಹಡಪದ, ಎಚ್.ಎಸ್. ಮೆಟಗಾರ, ಎಲ್.ಟಿ.ಮುಲ್ಲಾ, ಎನ್.ಎಸ್.ಕೋರಿಶೆಟ್ಟಿ, ಎಸ್.ಎಸ್.ಬಿಜ್ಜರಗಿ, ಎಂ.ಎಸ್.ಕೋಳಕೋರ, ಸಿ.ಐ.ದ್ಯಾವಪುರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-26-831186336

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.