ರಾಂಪುರ: ‘ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿ, ಅವರನ್ನು ಸೇವಾತತ್ಪರರನ್ನಾಗಿ ರೂಪಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ’ ಎಂದು ಸಿಂದಗಿ ಅಬಕಾರಿ ಇಲಾಖೆ ಸಿಪಿಐ ಶಿವಾನಂದ ಹೂಗಾರ ಹೇಳಿದರು.

ಸಮೀಪದ ಬಿಲ್ ಕೆರೂರಿನಲ್ಲಿ ಹಮ್ಮಿಕೊಂಡಿದ್ದ ಬೇವೂರಿನ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಶಂಭುಗೌಡ ಪಾಟೀಲ, ‘ಎನ್ಎಸ್ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಭಾವೈಕ್ಯ ಮೂಡಿಸುತ್ತದೆ. ಪರಿಸರ ಪ್ರಜ್ಞೆಯನ್ನು ಜಾಗೃತಗೊಳಿಸುತ್ತದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಬೇವೂರ ಆದರ್ಶ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ‘ವಿದ್ಯಾರ್ಥಿ ಜೀವನ ಪರಿಪೂರ್ಣವಾಗಬೇಕಾದರೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ. ಇಂತಹ ಸಮಾಜ ಸೇವಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಸಮಾಜದ ಬಗ್ಗೆ ಕಳಕಳಿ ಹೊಂದಿ ಸೇವೆಗೆ ಅಣಿಯಾಗಬೇಕು’ ಎಂದು ತಿಳಿಸಿದರು.

ಬಿಲ್ವಾಶ್ರಮ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು. ವಕೀಲ ಜಿ.ಜಿ.ಮಾಗನೂರ, ಐ.ಜಿ.ಕಡೇಮನಿ, ಲಕ್ಷ್ಮಣ ಅರಮನಿ, ಶಿವಪ್ಪ ಕರಲಿಂಗನ್ನವರ, ಲೋಕನಗೌಡ ಪಾಟೀಲ, ಶಿವಬಸಪ್ಪ ಇಟಗಿ, ಸಂತೋಷ ಕಟಗೇರಿ, ಪ್ರೊ. ಸಂಗಮೇಶ ಹಂಚಿನಾಳ, ಡಿ.ವೈ. ಬುಡ್ಡಿಯವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-19-138691038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.