ವಿಜಯಪುರ: ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಅಧ್ಯಯನ ಪ್ರಕ್ರಿಯೆಯಲ್ಲಿ ಯುಜಿಸಿ ನಿಗದಿಪಡಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿಲ್ಲ, ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳು ವಿದ್ಯಾರ್ಥಿಗಳು ಹಾಗೂ ಸಂಶೋಧಕರ ವಲಯದಲ್ಲಿ ಕೇಳಿಬರುತ್ತಿದ್ದು, ಈ ಬಗ್ಗೆ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಸಂಘಟನೆ ಆಗ್ರಹಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ, ಉನ್ನತ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ ಯುಜಿಸಿ ರೂಪಿಸಿರುವ ನಿಯಮಗಳು ಕೇವಲ ಮಾರ್ಗಸೂಚಿಗಳಲ್ಲ, ಅವು ಕಡ್ಡಾಯವಾಗಿ ಪಾಲಿಸಬೇಕಾದ ಶೈಕ್ಷಣಿಕ ಮಾನದಂಡಗಳಾಗಿವೆ. ಆದರೆ, ಅಕ್ಕಮಹಾದೇವಿ ವಿಶ್ವವಿದ್ಯಾಲಯ ಈ ನಿಯಮಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.

ಯುಜಿಸಿ ನಿಯಮಗಳನ್ನು ಪಾಲಿಸದೆ ಪದವಿ ಪ್ರದಾನ ಮಾಡಲಾಗುತ್ತಿರುವುದು ವಿದ್ಯಾರ್ಥಿಗಳಿಗೆ ಅನ್ಯಾಯವಾಗುವುದಲ್ಲದೆ, ಪಿಎಚ್.ಡಿ. ಪದವಿಯ ಮೌಲ್ಯವನ್ನು ಕುಗ್ಗಿಸುವ ಕೆಲಸವಾಗಿದೆ ಎಂದು ದೂರಿದರು.

ಈ ಹಿನ್ನೆಲೆದಲ್ಲಿ ಅಕ್ಕಮಹಾದೇವಿ ವಿವಿ ಸೇರಿದಂತೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಯುಜಿಸಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಕ್ಷಣ ಸೂಚನೆ ನೀಡಬೇಕು, ಪಿಎಚ್.ಡಿ. ಪದವಿ ಪ್ರದಾನ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು, ನಿಯಮ ಉಲ್ಲಂಘನೆ ಮಾಡಿದ ವಿಶ್ವವಿದ್ಯಾಲಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳಿಗಾಗಿ ವಿಶೇಷ ದೂರು ಪರಿಹಾರ ವ್ಯವಸ್ಥೆ (ಉಡಿievಚಿಟಿಛಿe ಅeಟಟ) ಸ್ಥಾಪಿಸಬೇಕು,ಪಿಎಚ್.ಡಿ. ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮತ್ತು ಪಾರದರ್ಶಕವಾಗಿಸಬೇಕು ಎಂದು ಒತ್ತಾಯಿಸಿದರು.

ದ್ರಾವಿಡ ವಿದ್ಯಾರ್ಥಿ ಪರಿಷತ್ತಿನ ಮುಖಂಡರಾದ ಚನ್ನು ಕಟ್ಟಿಮನಿ, ಗೌಡಪ್ಪ ಗೌಡ ಬಡಿಗೇರ್, ರಾಹುಲ್ ಕಳಸದವರ, ಮಂಜುನಾಥ ಕವಳಿ, ಪ್ರತಾಪ ತೊಳನೂರ, ಆಕಾಶ ಕುರ್ಣಿ, ಭೀಮು ಬಡಿಗೇರ, ಪರಸು, ಸಾಯಬಣ್ಣ, ನಿಂಗಣ್ಣ, ಸಚಿನ್, ಸುದೀಪ, ರಾಕೇಶ್, ಸುನಿಲ್, ಭೀಮರಾಯ ವಿಶಾಲ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-26-480946870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.