ಚಿಕ್ಕೋಡಿ: ‘ದೇಶದ ಅಭಿವೃದ್ಧಿಗೆ ಗುಣಮಟ್ಟದ ಸಂಶೋಧನೆ ಹಾಗೂ ಪಾರದರ್ಶಕತೆ ಅವಶ್ಯವಾಗಿದೆ. ದೇಶದ ಎಲ್ಲ ಕ್ಷೇತ್ರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ’ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಗ್ರಂಥಾಲಯ ವಿಭಾಗದ ಪ್ರೊ ಗವಿಸಿದ್ದಪ್ಪ ಆನಂದಹಳ್ಳಿ ಹೇಳಿದರು.

ಪಟ್ಟಣದ ಕೆಎಲ್ಇ ಸಂಸ್ಥೆಯ ಬಸಪ್ರಭು ಕೋರೆ ಪದವಿ ಮಹಾವಿದ್ಯಾಲಯದಲ್ಲಿ ಸಮಾಜ ವಿಜ್ಞಾನ ವಿಭಾಗದಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂಶೋಧನಾ ಕ್ಷೇತ್ರದಲ್ಲಿ ಮೊದಲು ವಿಷಯ ಆಯ್ಕೆ, ಉದ್ದೇಶ, ಗುರಿ, ಸಾಹಿತ್ಯ, ವಿಮರ್ಶೆ ಜ್ಞಾನ ಹೊಂದಿರಬೇಕು. ದಾಖಲೆಗಳ ವಿಶ್ಲೇಷಣೆ ಮೂಲಕ ಉದ್ದೇಶಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ಜಿ. ಕುಲಕರ್ಣಿ ಮಾತನಾಡಿ, ‘ಸಾಂಪ್ರದಾಯಿಕ ಸಂಶೋಧನಾ ವಿಧಾನಗಳು ಇಂದಿನ ಸಂಕೀರ್ಣ ಜಾಗತಿಕ ಸವಾಲುಗಳನ್ನು ಎದುರಿಸಲು ಸಾಕಾಗುವುದಿಲ್ಲ. ಹೊಸ ವಿಧಾನಗಳಾದ ಡಿಜಿಟಲ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಡೇಟಾ ವಿಶ್ಲೇಷಣೆ ಮತ್ತು ಸಹಕಾರ ಆಧಾರಿತ ಕಲಿಕಾ ವಿಧಾನಗಳನ್ನು ಸಂಶೋಧನಾ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದು ಹೇಳಿದರು.

ಉಪಪ್ರಾಚಾರ್ಯ ಪ್ರೊ. ಸುಧೀರ ಕೋಠಿವಾಲೆ, ಐಕ್ಯೂಎಸಿ ಸಂಯೋಜಕ ವಿನಾಯಕ ಮಂಜಲಾಪುರ, ಬಸವರಾಜ ಎಚ್., ಸದಾಶಿವ ಹಾದಿಮನಿ, ಸಿದ್ದಣ್ಣಾ ನಾಯಕ ಇದ್ದರು. ಜಗದೀಶ ಬಾರಂಗಿ ಸ್ವಾಗತಿಸಿ, ಜಿ.ಜಿ. ದೊಡ್ಡಮನಿ ನಿರೂಪಿಸಿ, ಸುವರ್ಣಾ ಮಾದರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-21-501299025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.