ವಿಜಯಪುರ: ‘ಸಂಶೋಧನೆ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು’ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಔಷಧ ಮಂಡಳಿ ಮತ್ತು ಭಾರತದ ಔಷಧ ಶಿಕ್ಷಕರ ಸಂಘದ ರಾಜ್ಯ ಶಾಖೆ ಆಯೋಜಿಸಿರುವ ಔಷಧೀಯ ಶಿಕ್ಷಣ, ಸಂಶೋಧನೆ ಮತ್ತು ಉದ್ಯಮದಲ್ಲಿ ಪ್ರಗತಿಗಳು ವಿಷಯ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಔಷಧ ಮಂಡಳಿ ಮತ್ತು ಭಾರತದ ಔಷಧ ಶಿಕ್ಷಕರ ಸಂಘದ ರಾಜ್ಯ ಶಾಖೆ ಅಧ್ಯಕ್ಷ ಡಾ. ಎಚ್. ಶಿವಕುಮಾರ ಮಾತನಾಡಿದರು.

ವಿಜಯಪುರ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ ಎಸ್., ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೋರ್ಡ್ ಆಫ್ ಸ್ಟಡೀಸ್ ಅಧ್ಯಕ್ಷ ಡಾ. ಚಂದ್ರಶೇಖರ, ವೆಂಕಟೇಶ, ಕಾಲೇಜಿನ ಪ್ರಾಚಾರ್ಯ ಡಾ. ಸಿ. ಮಲ್ಲಿಕಾರ್ಜುನ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಡಾ. ಸಿ. ಸಿ. ಪಾಟೀಲ, ಡಾ. ಸುನಂದಾ, ಸುಶೀಲ ಲೋಂಧೆ, ಡಾ. ಎಸ್. ಎಸ್. ಬಿರಾದಾರ ಎಲ್ಲ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಚಾರ ಸಂಕಿರಣದಲ್ಲಿ ನಾನಾ ರಾಜ್ಯಗಳ ಔಷಧಾಲಯ ಸಂಸ್ಥೆಗಳಿಂದ 300 ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-57052392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.