ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ಮೇ 30ರಂದು ಬೆಳಿಗ್ಗೆ 8ಕ್ಕೆ ಅಫಜಲಪುರ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ನಡೆಯಲಿದೆ.

ಅಲ್ಪಸಂಖ್ಯಾತರ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯು ಪ್ರವೇಶಾತಿಗಾಗಿ ಆಯ್ಕೆಯಾದ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳು ಹಾಗೂ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಕೌನ್ಸೆಲಿಂಗ್ನಲ್ಲಿ ಭಾಗವಹಿಸಬಹುದು.

ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯಿತಿ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-586109 ಹಾಗೂ ದೂ: 08352-295523 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-26-1342186874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.