ವಿಜಯಪುರ: ಪ್ರತಿಯೊಂದು ಸಾಧನೆಗೆ ಸ್ಫೂರ್ತಿ ಆತ್ಮವಿಶ್ವಾಸ, ವಿದ್ಯಾರ್ಥಿಗಳು ಸಮಾಜದಲ್ಲಿ ಒಂದು ಸ್ಥಾನವನ್ನು ಪಡೆದುಕೊಳ್ಳಬೇಕೆಂದರೆ ನಿರಂತರ ಪರಿಶ್ರಮ, ಅಧ್ಯಯನ ಸತತ ಪ್ರಯತ್ನ ಆತ್ಮವಿಶ್ವಾಸದಿಂದ ಮಾತ್ರ ಸಾಧ್ಯ ಎಂದು ಜಮಖಂಡಿಯ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರ ಕನ್ನಡ ವಿಭಾಗದ ಸಂಯೋಜಕ ಡಾ.ವೈ. ವೈ.ಕೊಕ್ಕನವರ ಹೇಳಿದರು.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಹೋಗದಲ್ಲಿ ಶನಿವಾರ ಆಯೋಜಿಸಿದ್ದ 2025–26 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಓದಿ ಉನ್ನತ ಹುದ್ದೆಗೆ ತಲುಪಬೇಕು. ವಿದ್ಯಾರ್ಥಿಗಳು ಸೋಲೇ ಗೆಲುವಿನ ಸೋಪಾನ ಆ ನಿಟ್ಟಿನಲ್ಲಿ ಸೋತೆ ಎಂದು ಎಂದೆಂದಿಗೂ ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು ಎಂದರು.

ವಿದ್ಯಾರ್ಥಿಗಳ ಜೀವನದದಲ್ಲಿ ನಿರ್ದಿಷ್ಟ ಗುರಿ ಮುಖ್ಯ ಅದರಂತೆ ವಿದ್ಯಾರ್ಥಿಗಳು ಸಮಯದ ಸದುಪಯೋಗ ಪಡೆದುಕೊಂಡು ಸಾಧಕನಾಗಬೇಕು ಎಂದರು.

ಮಹಾವಿದ್ಯಾಲಯದ ವಿವಿಧ ಸ್ನಾತಕ, ಸ್ನಾತೋತ್ತರ, ಸಂಶೋಧನ, ಕ್ರೀಡಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಸಾಧಕರನ್ನು ಸನ್ಮಾಸಿಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಅನೀಲ ಬಿ.ನಾಯಕ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ನ್ಯಾಕ್ ಸಂಯೋಜಕ ಡಾ.ಮಹೇಶಕುಮಾರ ಕೆ, ದೈಹಿಕ ನಿರ್ದೇಶಕ ಎಸ್.ಕೆ.ಪಾಟೀಲ, ಸಾಂಸ್ಕೃತಿಕ ವಿಭಾಗದ ಕಾಯಾಧ್ಯಕ್ಷೆ ಡಾ. ರೇಣುಕಾದೇವಿ ಕಮತರ, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀಧರ ಚಲವಾದಿ, ನೇಹಾ ಬಾಲಗಾಂವ, ಡಾ.ಉಷಾದೇವಿ ಹಿರೇಮಠ, ಪ್ರೊ ಶ್ವೇತಾ ಸವನೂರ ಮತ್ತು ಪ್ರೊ ಸ್ವಾತಿ ಪಾಟೀಲ, ಪ್ರೊ ರೂಪಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-26-919537356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.