ವಿಜಯಪುರ: ಇಂಧನಗಳ ಮಿತ ಬಳಕೆಯ ಸಂಕಲ್ಪ ಮಾಡುವ ನಿಟ್ಟಿನಲ್ಲಿ ಆರ್ಕೆಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶುಕ್ರವಾರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ನರ್ಸಿಂಗ್ ಕಾಲೇಜು, ಆಯುರ್ವೇದ ವೈದ್ಯಕೀಯ ವಿವಿ ವಿದ್ಯಾರ್ಥಿಗಳು ಈ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಇಂಧನ ಸಂಪನ್ಮೂಲಗಳನ್ನು ಜವಾಬ್ದಾರಿಯುತವಾಗಿ ಬಳಸುವುದು, ವ್ಯರ್ಥವನ್ನು ತಪ್ಪಿಸುವುದು, ಪರಿಸರ ಸ್ನೇಹಿ ಸಾರಿಗೆ ಕ್ರಮಗಳನ್ನು ಉತ್ತೇಜಿಸುವುದು ಹಾಗೂ ಶಾಶ್ವತ ಜೀವನಶೈಲಿಗೆ ಬೆಂಬಲ ನೀಡುವುದಾಗಿ ಪ್ರತಿಜ್ಞೆ ಕೈಗೊಂಡರು.

ಹೆಚ್ಚುತ್ತಿರುವ ಇಂಧನ ಸಂಕಷ್ಟದ ಬಗ್ಗೆ ಜಾಗೃತಿ ಮೂಡಿಸುವುದು, ಶಾಶ್ವತ ಭವಿಷ್ಯಕ್ಕಾಗಿ ಇಂಧನ, ವಿದ್ಯುತ್ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯತ್ತ ಪ್ರತಿಯೊಬ್ಬರ ಜವಾಬ್ದಾರಿಯನ್ನು ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಈ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಕರ್ಪೂರಮಠ ಮಾತನಾಡಿ, ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. ಇಂಧನ ಆಧಾರಿತ ವಾಹನಗಳ ಅನಗತ್ಯ ಬಳಕೆಯನ್ನು ಕಡಿಮೆ ಮಾಡುವ ಅಗತ್ಯವಿದ್ದು, ಇದನ್ನು ಪ್ರತಿಯೊಬ್ಬರು ಚಾಚೂ ತಪ್ಪದೇ ಪಾಲಿಸಬೇಕು ಎಂದರು.

ಪ್ರಾಚಾರ್ಯ ಡಾ.ಎನ್.ಎಂ. ರುದ್ರಗೌಡರ್, ಅಮಿತ್ ಎಚ್, ಡಾ. ಮೃಣಾಲ್ ರುದ್ರಗೌಡರ್ ಮಾತನಾಡಿಇದರು. ಡಾ. ತೇಜಸ್ವಿನಿ ಜನಗೊಂಡ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ವಿದ್ಯಾರ್ಥಿಗಳು, ಸಿಬ್ಬಂದಿಗೆ ಪ್ರಸ್ತುತ ಇಂಧನ ಸಂಕಷ್ಟ, ಇಂಧನ ಸಂರಕ್ಷಣೆ ಮತ್ತು ಪರಿಸರ ರಕ್ಷಣೆಗೆ ಪ್ರತಿಯೊಬ್ಬರೂ ನೀಡಬಹುದಾದ ಕೊಡುಗೆಗಳ ಕುರಿತು ತಮ್ಮ ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ಸ್ಥಳೀಯ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-26-2021709637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.