ವಿಜಯಪುರ: ‘ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುವವರ ಸಂಖ್ಯೆ ದೇಶದಲ್ಲಿ ಪ್ರತಿ ವರ್ಷ ಹೆಚ್ಚಾಗುತ್ತಿದ್ದು, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ’ ಎಂದು ಬೆಳಗಾವಿ ಲೋಕಾಯುಕ್ತ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಹೇಳಿದರು.

ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಈಚೆಗೆ ಆಯೋಜಿಸಲಾದ ಅಪಘಾತಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಭಾರತದ ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಪೊಲೀಸ್ ಕಾಯ್ದೆಗಳಿವೆ. ಕ್ರಿಮಿನಲ್ ನ್ಯಾಯ ವ್ಯವಸ್ಥೆ, ಹೆಚ್ಚುತ್ತಿರುವ ಸೈಬರ್ ಅಪರಾಧಗಳು, ಅವುಗಳ ಬಗ್ಗೆ ವಹಿಸಬೇಕಿರುವ ಮುಂಜಾಗೃತೆ, ವಿದ್ಯಾರ್ಥಿಗಳು ಡಿಜಿಟಲ್ ವೇದಿಕೆಗಳನ್ನು ಜಾಗರೂಕತೆಯಿಂದ ಬಳಸುವುದು, ಮಾದಕ ದ್ರವ್ಯಗಳ ದುಷ್ಪರಿಣಾಮಗಳು, ಧೂಮಪಾನದ ದುಷ್ಪರಿಣಾಮಗಳ ಕುರಿತು ಅವರು ಮಾತನಾಡಿದರು.

ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ‘ಸಂಚಾರಿ ನಿಯಮಗಳನ್ನು ಪಾಲಿಸುವುದು, ಹೆಲ್ಮೆಟ್ ಧರಿಸುವುದು ಮತ್ತು ವಾಹನ ಚಾಲನೆ ವೇಳೆ ವೇಗ ನಿಯಂತ್ರಣ ಕಾಪಾಡಿಕೊಳ್ಳುವುದರಿಂದ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ದುಶ್ಚಟಗಳನ್ನು ತೊರೆದು ಉತ್ತಮ ಆರೋಗ್ಯ ಮತ್ತು ಶಿಸ್ತಿನ ಜೀವನವನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಕಾನೂನು ಶಾಲೆಯ ಪ್ರಾಚಾರ್ಯ ರಘುವೀರ ಕುಲಕರ್ಣಿ, ವೈದ್ಯಕೀಯ ಕಾಲೇಜಿನ ಹಿರಿಯ ಉಪಪ್ರಾಚಾರ್ಯ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಡೀಮ್ಡ್ ವಿವಿಯ ಸತೀಶ ಪಾಟೀಲ, ಬಿ. ಎಸ್. ಪಾಟೀಲ, ಈರಯ್ಯ ಮಠಪತಿ, ಫಾರೆನ್ಸಿಕ್ ಮೆಡಿಸೀನ್ ವಿಭಾಗದ ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-26-1153592057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.