ವಿಜಯಪುರ: ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪರಿಶೀಲನೆಗೆ ಉನ್ನತ ಮಟ್ಟದ ತಜ್ಞರ ತಂಡ ಮೇ 4 ಮತ್ತು 5ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಮೀನಾ ಚಂದಾವರಕರ ಅವರ ನೇತೃತ್ವದ ನಾಲ್ಕು ಜನ ತಜ್ಞರ ತಂಡ ವಿಜಯಪುರದಲ್ಲಿರುವ ವಿವಿಯ ಮುಖ್ಯ ಆವರಣಕ್ಕೆ ಭೇಟಿ ನೀಡಲಿದೆ.

ತಜ್ಞರ ತಂಡದ ಸದಸ್ಯರಾಗಿ ಕಲಬುರಗಿ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಎನ್.ಬಿ.ನಡವಿನಮನಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್.ನಾಗೂರ ಮತ್ತು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪ್ರೊ.ಬಸವರಾಜ ಡೋಣೂರು ಆಗಮಿಸಲಿದ್ದಾರೆ.

ಮೊದಲ ದಿನ ಮೇ 4ರಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ವಿವಿಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಾಧನೆಗಳನ್ನು ಪ್ರಸ್ತುತಪಡಿಸುವರು. ಮಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಮತ್ತು ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ ಉಪಸ್ಥಿತರಿರಲಿದ್ದಾರೆ ಎಂದು ತಂಡದ ಸಂಚಾಲಕಿ ಪ್ರೊ.ಶಾಂತಾದೇವಿ ಟಿ ಮತ್ತು ಸಹ ಸಂಚಾಲಕಿ ಡಾ.ಶ್ವೇತಾ ಬೆಂಗಾರೆ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-26-2133973461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.