ವಿರಾಜಪೇಟೆ: ‘ಶಿಕ್ಷಣ ಮುಗಿಸಿದ ಪದವೀಧರ ವೈದ್ಯರು ಹೊಸ ಅವಿಷ್ಕಾರಗಳ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಕೊಡುಗೆಗಳಾಗಿ ನೀಡಬೇಕು’ ಎಂದು ಅಕಾಡೆಮಿ ಆಫ್ ಇಂಪ್ಲಾಂಟಾಲಜಿ ಸ್ಥಾಪಕ ಅಧ್ಯಕ್ಷ ಡಾ.ಆಶೀಶ್ ಕಕ್ಕಾರ್ ಸಲಹೆ ನೀಡಿದರು.

ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಕಾಲೇಜಿನ ವಾರ್ಷಿಕೋತ್ಸವ, ಸುಸ್ಥಿರ ಉದ್ಯಮಿ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಅವರು ಮಾತನಾಡಿದರು. ವೈದ್ಯರು ಕೌಶಲಯುತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಸುನೀಲ್ ಮುದ್ದಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ , 24 ವರ್ಷಗಳಲ್ಲಿ ಕಾಲೇಜು ಸಾವಿರಕ್ಕೂ ಅಧಿಕ ನುರಿತ ದಂತ ವೈದ್ಯರನ್ನು ಸಮಾಜಕ್ಕೆ ನೀಡಿದೆ. ಕಾಲೇಜುಗಳು ವೃತ್ತಿಧರ್ಮಕ್ಕೆ ಹೊಸ ಆಯಾವನ್ನು ಕಲ್ಪಿಸುವ ಗುರಿ ಹೊಂದಬೇಕು ಎಂದರು.

ಪ್ರಾಂಶುಪಾಲ ಡಾ. ಕೆ.ಸಿ. ಪೊನ್ನಪ್ಪ ವಾರ್ಷಿಕ ವರದಿಯನ್ನು ಮಂಡಿಸಿದರು. ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಶ್ರೀಮತಿ ರಾಣಿ ಅಯ್ಯಪ್ಪ ಪ್ರತಿಷ್ಠಾನದಿಂದ ಕೊಡಗಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸುವ ವ್ಯಕ್ತಿಗಳಿಗೆ ನೀಡುವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸುಸ್ಥಿರ ಉದ್ಯಮಿ ಜೇನು ಕೃಷಿಯಲ್ಲಿ ಸಾಧನೆ ಮಾಡಿದ ನಡಿಕೇರಿಯಂಡ ಸುಬ್ಬಯ್ಯ ಅವರಿಗೆ ಪ್ರಶಸ್ತಿ ಪ್ರದಾನ ನೀಡಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿದರು.

ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-771083201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.