ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಎಂಜಿನಿಯರಿಂಗ್ ಕೋರ್ಸ್ನ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿದೆ.

ಕುಲಪತಿ ಪ್ರೊ.ಎಸ್.ವಿದ್ಯಾಶಂಕರ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಯು.ಜೆ.ಉಜ್ವಲ್ ಜಂಟಿಯಾಗಿ ಶುಕ್ರವಾರ ಫಲಿತಾಂಶ ಬಿಡುಗಡೆ ಮಾಡಿದರು.

ಬಿ.ಇ., ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ 56,192 ವಿದ್ಯಾರ್ಥಿಗಳು ಹಾಜರಾಗಿದ್ದರು. ಶುಕ್ರವಾರ ಸಂಜೆ 5.30ಕ್ಕೆ ಪರೀಕ್ಷೆ ಮುಗಿದಿದ್ದು, 5.40ಕ್ಕೆ ಫಲಿತಾಂಶ ಬಿಡುಗಡೆ ಮಾಡಿದೆ. ಶೇ 99.98 ಫಲಿತಾಂಶ ದಾಖಲಾಗಿದೆ.

‘ವಿಟಿಯು ವಿದ್ಯಾರ್ಥಿ ಸ್ನೇಹಿಯಾಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ’ ಎಂದು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ ಹೇಳಿದರು. ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಣೆಗೆ ವೆಬ್ಸೈಟ್ https://results.vtu.ac.inಗೆ ಭೇಟಿ ನೀಡಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-1556973147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.