ವಿದ್ಯಾರ್ಥಿಗಳಿಗೆ ಈಗಿನ ಅವಶ್ಯಕ್ಕೆ ತಕ್ಕಂತೆ ಪಠ್ಯಕ್ರಮ ಪರಿಷ್ಕರಿಸಲಾಗಿದೆ. ಕೃತಕ ಬುದ್ಧಿಮತ್ತೆಯನ್ನು ಪಠ್ಯಕ್ರಮದಲ್ಲಿ ಅಳವಡಿಸಿಕೊಂಡಿದ್ದು ವಿದ್ಯಾರ್ಥಿಗಳಿಗೆ ಕೌಶಲ ಶಿಕ್ಷಣ ನೀಡಲು ಹಲವು ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೀಗಾಗಿ, ವಿದೇಶದಲ್ಲಿರುವ ಕಾಲೇಜುಗಳು ಮಾನ್ಯತೆಗಾಗಿ ಅರ್ಜಿ ಸಲ್ಲಿಸುತ್ತಿವೆ.

ವಿಟಿಯು ವ್ಯಾಪ್ತಿಯಲ್ಲಿ 220 ಎಂಜಿನಿಯರಿಂಗ್ ಕಾಲೇಜುಗಳಿವೆ. ಈ ಎಲ್ಲ ಕಾಲೇಜುಗಳು ರಾಜ್ಯದ ಒಳಗೆ ಇದ್ದು, ಅಂದಾಜು ಮೂರು ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದೇಶದಲ್ಲಿಯೇ ಅತಿ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳನ್ನು ಹೊಂದಿರುವ ವಿಶ್ವವಿದ್ಯಾಲಯವಾಗಿದೆ.

‘ನವೋದ್ಯಮಿ’ಗೆ ರಜೆ ಸೌಲಭ್ಯ: ವಿಟಿಯು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷದಲ್ಲೇ ನವೋದ್ಯಮಗಳನ್ನು ಆರಂಭಿಸಿದರೆ, ಅಂತಹವರಿಗೆ ಎರಡನೇ ವರ್ಷದಲ್ಲಿ ಕಾಲೇಜಿಗೆ ಬರುವುದಕ್ಕೆ ವಿನಾಯಿತಿ ದೊರೆಯಲಿದೆ.

‘ಮೊದಲ ವರ್ಷ ಪೂರ್ಣಗೊಂಡ ನಂತರ ನವೋದ್ಯಮದ ಯೋಜನೆ ಯಶಸ್ವಿಗೊಳಿಸಲು ವಿದ್ಯಾರ್ಥಿಗಳಿಗೆ ಒಂದು ವರ್ಷ ಅವಕಾಶ ನೀಡಲಾಗುತ್ತದೆ. ಎರಡನೇ ವರ್ಷ ಕಾಲೇಜಿಗೆ ಬರಬಹುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ವಿದ್ಯಾಶಂಕರ್ ತಿಳಿಸಿದರು.

‘ನವೋದ್ಯಮ ಪ್ರಾರಂಭಿಸಲು ವಿದ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳಿವೆ. ಕಂಪನಿಗಳಿಂದಲೂ ನೆರವು ಸಿಗುತ್ತಿದೆ. ಇದಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಒಂದು ವರ್ಷ ಸಮಯಾವಕಾಶ ನೀಡಲು ಉದ್ದೇಶಿಸಿದ್ದೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-51-1422372747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.