ಯಾದಗಿರಿ: ಇಲ್ಲಿನ ಜಿಲ್ಲಾ ಬಾಲ ಭವನದಲ್ಲಿ ರಾಜ್ಯ ಬಾಲ ಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಬುಧವಾರ ಸಂಪನ್ನಗೊಂಡಿತು.

15 ದಿನಗಳು ನಡೆದ ಶಿಬಿರದಲ್ಲಿ ಮಕ್ಕಳು ಸಂತಸದಿಂದ ಪಾಲ್ಗೊಂಡರು. ಚಿತ್ರಕಲೆ, ಕರಕುಶಲ, ನಾಟಕ, ನೃತ್ಯ, ಯೋಗ, ಕರಾಟೆ, ಮಲ್ಲಕಂಬ, ಓದುವ ಕೌಶಲದಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ‘ಸಮಾಜದಲ್ಲಿ ಉನ್ನತ ಶ್ರೇಣಿಗೆ ತಲುಪಬೇಕಾದರೆ ವಿದ್ಯಾಭ್ಯಾಸದ ಜೊತೆಗೆ ಸಣ್ಣ ಪುಟ್ಟ ಕಲೆಗಳನ್ನು ಬೆಳಸಿಕೊಳ್ಳಬೇಕು. ಶಿಬಿರದಲ್ಲಿ ಮಕ್ಕಳು ಕರಕುಶಲ, ಚಿತ್ರಕಲೆ, ಜೇಡಿಮಣ್ಣಿನ ಕಲೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕಲಿತ್ತಿದ್ದಾರೆ’ ಎಂದರು.

‘ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಕ್ರೀಡೆ ಮತ್ತು ಕಲೆಗಳಲ್ಲಿ ಹೆಚ್ಚಿನ ಅಭಿರುಚಿ ಬೆಳಸಿಕೊಂಡು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಉತ್ತಮ ಪ್ರದರ್ಶ ನೀಡಬೇಕು’ ಎಂದು ಹೇಳಿದರು.

ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಮಾತನಾಡಿ, ‘ಪ್ರತಿಯೊಂದು ಮಗುವಿನಲ್ಲಿ ತನ್ನದೆಯಾದ ಕಲೆ ಇರುತ್ತದೆ. ಮಕ್ಕಳು ಇಂತಹ ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡು ತಮ್ಮಲ್ಲಿನ ಕಲೆಯನ್ನು ಪ್ರದರ್ಶಿಸಬೇಕು’ ಎಂದರು.

ಅಗ್ನಿಶಾಮಕ ಠಾಣೆಯ ಅಧಿಕಾರಿ ವೀರೇಶ ಅವರು ಅಗ್ನಿ ಶಾಮಕದಳ ಇಲಾಖೆ, ಅಗ್ನಿ ಅವಘಡ ಸಂದರ್ಭದಲ್ಲಿ ರಕ್ಷಣೆ ಕುರಿತು ಅರಿವು ಮೂಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಭೀಮರಾಯ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಿಕಾ ಬಿ.ವಿ., ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ರುದ್ರಸ್ವಾಮಿ ಚಿಕ್ಕಮಠ, ಚಂದಪ್ಪ, ಬಾಲ ಮಂದಿರದ ಅಧೀಕ್ಷಕಿ ಮಹೇಶ್ವರಿ, ಜಿಲ್ಲಾ ಸಂಯೋಜಕ ಅನಿಲಕುಮಾರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-30-310191328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.