ಯಾದಗಿರಿ: ‘ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ರಾಷ್ಟ್ರದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ತಂತ್ರಜ್ಞಾನ ಮೂಲಕ ರಕ್ಷಣೆ ಮಾಡಬೇಕಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜ್ಞಾನ ಭಾರತಂ ಮಿಷನ್ ಯೋಜನೆಯ ಜಿಲ್ಲಾ ಮಟ್ಟದ ಸಮೀಕ್ಷೆ, ಗಣತಿ ಕಾರ್ಯಕ್ಕೆ ಹಸ್ತಪ್ರತಿಗಳ ಸಮೀಕ್ಷೆಯ ಪೋಸ್ಟರ್ಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ತಂತ್ರಜ್ಞಾನದ ನೆರವಿನಿಂದ ಶಾಶ್ವತವಾಗಿ ಉಳಿಸಲು ಅವುಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ ಮಾಡಲಾಗುವುದು’ ಎಂದರು.

‘ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ವೇದಿಕೆಯ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುವುದು. ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆಗೆ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಯೋಜನೆ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

‘ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಅಭಿವೃಧ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಷನ್ನಲ್ಲಿ ಅಪ್ಲೋಡ್ ಮಾಡಿ ಸಂಗ್ರಹಣೆಗೊಳ್ಳುವ ಹಸ್ತಪ್ರತಿಗಳ ರಾಷ್ಟ್ರೀಯ ಭಂಡಾರದ (ನ್ಯಾಷನಲ್ ರೆಸ್ಪೊಸಿಟೊರಿ) ದತ್ತಾಂಶದ ಮಾಹಿತಿಯನ್ನು ವಿಶ್ವಕ್ಕೆ ಹಂಚಿಕೊಳ್ಳುವ ಉದ್ದೇಶವಿದೆ’ ಎಂದರು.

‘ಈ ಯೋಜನೆಗೆ ರಾಜ್ಯ ಸರ್ಕಾರವು ಕೈಜೋಡಿಸಿ ರಾಜ್ಯದಾದ್ಯಂತ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯವನ್ನು ಪ್ರಾರಂಭಿಸಿ, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. ಯೋಜನೆಯ ಸಮನ್ವಯವನ್ನು ಸುಗಮಗೊಳಿಸಲು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಜ್ಞಾನ ಭಾರತಂ ಮಿಷನ್ ಜಾರಿಗೆ ರಾಜ್ಯದ ನೋಡೆಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಹೇಳಿದರು.

‘ಗ್ರಂಥಾಲಯ, ದೇವಾಲಯ, ಮಠ, ಶೈಕ್ಷಣಿಕ ಸಂಸ್ಥೆಗಳು ಮತ್ತು ಖಾಸಗಿ ಸಂಗ್ರಹಗಳಲ್ಲಿ ಇರುವ ಹಸ್ತಪ್ರತಿಗಳನ್ನು ಗುರುತಿಸಿ ದಾಖಲಿಸುವುದು. ಸಂಗ್ರಹ ಸ್ಥಳಗಳಿಗೆ ಪ್ರವೇಶ ಕಲ್ಪಿಸಿ, ಸಂರಕ್ಷಕರ ಸಹಕಾರವನ್ನು ಸಮೀಕ್ಷಾ ಪ್ರಕ್ರಿಯೆಯಲ್ಲಿ ಖಚಿತಪಡಿಸಲಾಗುವುದು’ ಎಂದರು.

‘ಸಮೀಕ್ಷಾ ತಂಡಗಳಿಗೆ ದಾಖಲೀಕರಣ ಹಾಗೂ ಪಟ್ಟಿ ತಯಾರಿಕೆ ಕಾರ್ಯಕ್ಕೆ ನೆರವಾಗಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಹಸ್ತಪ್ರತಿ ಸಂರಕ್ಷಕರಲ್ಲಿ ಮಿಷನ್ನ ಉದ್ದೇಶಗಳ ಕುರಿತು ಜಾಗೃತಿ ಮೂಡಿಸಬೇಕು. ರಾಜ್ಯ ನೋಡೆಲ್ ಇಲಾಖೆಗೆ ನಿಯಮಿತ ಅವಧಿಯಲ್ಲಿ ಪ್ರಗತಿಯ ವರದಿ ಸಲ್ಲಿಸಿ. ಅಗತ್ಯ ಆಡಳಿತಾತ್ಮಕ ಹಾಗೂ ಲಾಜಿಸ್ಟಿಕ್ ಬೆಂಬಲ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.

ಈ ವೇಳೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-30-213502751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.