ಯಾದಗಿರಿ: ‘ಡಿಡಿಯು ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ನಗರದಲ್ಲಿ ಮೇ 7ರಂದು ಸಾಮೂಹಿಕ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಸಂಸ್ಥೆ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ಹೇಳಿದರು.

‘ಸೂರ್ಯವರ್ಧನ ಗುರೂಜಿ ಸಮ್ಮುಖದಲ್ಲಿ ನಡೆಯುವ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ 2ರಿಂದ 5 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕಲ್ಯಾಣ ಕರ್ನಾಟಕ ಭಾಗದ ಅನೇಕ ಪಾಲಕರು ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕಾಗಿ ಶೃಂಗೇರಿ, ಮೈಸೂರು ಸೇರಿದಂತೆ ಇತರೆ ದೂರದ ನಗರಗಳಿಗೆ ತೆರಳುತ್ತಾರೆ. ಸ್ಥಳೀಯವಾಗಿ ಅನುಕೂಲ ಆಗುವಂತೆ ಡಿಡಿಯು ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರಾಭ್ಯಾಸ ಆಯೋಜನೆ ಮಾಡಲಾಗಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯಸ್ಥ ವೆಂಕಟೇಶ ಪೂಜಾರಿ, ಸಿಬಿಎಸ್ಇ ವಿಭಾಗದ ಮುಖ್ಯಸ್ಥ ಬಬಿನ್ ರಾಜ್, ಸಿಬ್ಬಂದಿ ರಾಜಶೇಖರ ಗೋಪಾಲ ಕೃಷ್ಣ, ರವಿ ಪವಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-30-1312361532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.