ಯಾದಗಿರಿ: ಎಐಡಿಎಸ್ಒ ಸಂಘಟನೆಯು ಸರ್ಕಾರಿ ಶಾಲೆಗಳನ್ನು ಉಳಿಸಲು ರಾಜ್ಯದಾದ್ಯಂತ ನಡೆಸುತ್ತಿರುವ ಪ್ರತಿರೋಧ ಚಳವಳಿಯ ಭಾಗವಾಗಿ ‘ನಮ್ಮೂರ ಶಾಲೆ ನಮ್ಮಯ ಕಣ್ಮಣಿ’ ನಮ್ಮ ಶಾಲೆಯನ್ನು ನಮ್ಮೂರಲ್ಲಿಯೇ ಉಳಿಸಿ ಎಂಬ ಘೋಷವಾಕ್ಯದ ಬ್ಯಾನರ್ ತಾಲ್ಲೂಕಿನ ತಳಕ ಸರ್ಕಾರಿ ಪ್ರಾಥಮಿಕ ಶಾಲೆ ಮುಂಭಾಗದಲ್ಲಿ ಕಟ್ಟಲಾಯಿತು.

ಈ ವೇಳೆ ಮಾತನಾಡಿದ ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯ ನಾಗರಾಜ್ ರಾವೂರ್, ‘ಕೆಪಿಎಸ್ ಮ್ಯಾಗ್ನೆಟ್ ನೀತಿಯ ಪ್ರಕಾರ ಸರ್ಕಾರವು ತಳಕ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಹೆಡಗಿಮದ್ರಾ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡಲು ಹೊರಟಿದೆ. ತಳಕ ಗ್ರಾಮದ ಶಾಲೆಯನ್ನು ವಿಲೀನ ಮಾಡಬಾರದು’ ಎಂದರು.

‘ಹೆಡಗಿಮದ್ರಾ ಗ್ರಾಮಕ್ಕೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಮಕ್ಕಳು ಶಾಲೆಗೆ ಹೋಗಲು ಹೇಗೆ ಸಾಧ್ಯ? ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು’ ಎಂದು ಹೇಳಿದರು.

ತಳಕ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯದರ್ಶಿ ಗಂಗಾಧರ್, ಸದಸ್ಯರಾದ ಜಮಾಲ್ ಸಾಬ್, ವಿಕ್ರಮ್ ಸೇರಿದಂತೆ ಶಾಲಾ ಮಕ್ಕಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-30-1315613925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.