ಯಲಬುರ್ಗಾ: ಪಟ್ಟಣದ ಎಸ್.ಎ.ನಿಂಗೋಜಿ ಬಿ.ಇಡಿ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಘಟಕಗಳ ಸಹಯೋಗದಲ್ಲಿ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಡಿ.ಎಚ್. ಮಾತನಾಡಿ, ‘ಯಾವುದೇ ಕಾಯಿಲೆಯಾಗಿರಲಿ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಮುಖ್ಯವಾಗಿದೆ. ವಿಶೇಷವಾಗಿ ಏಡ್ಸ್ ತಡೆಗಟ್ಟುವಲ್ಲಿ ವ್ಯಾಪಕವಾಗುವುದನ್ನು ನಿಯಂತ್ರಿಸುವುದು ಅವಶ್ಯಕವಾಗಿದೆ. ಈ ಮೂಲಕ ನಿರ್ಮೂಲನೆಗೆ ಕ್ರಮವಹಿಸಬೇಕಾಗುತ್ತದೆ. ಈ ಬಗ್ಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಹೆಚ್ಚಿನ ಮಾಹಿತಿ ನೀಡಲಿದ್ದಾರೆ’ ಎಂದರು.

ಆಪ್ತ ಸಮಾಲೋಚಕ ಕಾಳಪ್ಪ ಬಡಿಗೇರ ಮಾತನಾಡಿ, ‘ಮೊಬೈಲ್ನಲ್ಲಿ ಎಚ್ಐವಿ ಸ್ಥಿತಿಗತಿಯನ್ನು ಪರಿಶೀಲನೆಗೆ ಒಳಪಡಿಸಿಕೊಳ್ಳಬಹುದು. ಹಾಗೆಯೇ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಮಹತ್ವ ವಿವರಿಸಿದರು. ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್ ಸ್ಥಾಪನೆ ಮಾಡಿದ್ದು ಉತ್ತಮ ಬೆಳವಣಿಗೆ ಎಂದರು.

ಆರೋಗ್ಯ ಮಿತ್ರ ಹುಚ್ಚೀರಪ್ಪ ತಳವಾರ ಮಾತನಾಡಿ, ‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕುರಿತ ಸಮಗ್ರ ಮಾಹಿತಿ ನೀಡಿದರು. ಕಾಲೇಜಿನ ಉಪನ್ಯಾಸಕ ವಿ.ಎಸ್. ಪತ್ತಾರ ಸೇರಿ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-35-323757600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.