ಯಲಬುರ್ಗಾ: ಕುಕನೂರು ಮತ್ತು ಯಲಬುರ್ಗಾ ತಾಲ್ಲೂಕಿನ ಅನುದಾನರಹಿತ ಶಾಲೆಗಳಲ್ಲಿ 2026-27ನೇ ಸಾಲಿನ ಶಾಲಾ ಶುಲ್ಕ ಮಾಹಿತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಗೌಡ್ರ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಈಗಾಗಲೇ ಅನುದಾನ ರಹಿತ ಶಾಲೆಗಳಲ್ಲಿ ಪ್ರವೇಶಗಳು ಪ್ರಾರಂಭವಾಗಿವೆ. ಅಲ್ಲದೇ ಪ್ರವೇಶ ಶುಲ್ಕವನ್ನು ಪಡೆಯುತ್ತಿರುವ ಬಗ್ಗೆಯೂ ಸಾರ್ವಜನಿಕರಿಂದ ದೂರಗಳು ಬಂದಿವೆ. ಆದರೆ ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ನಿಯಮ 48ರ ಪ್ರಕಾರ ಶುಲ್ಕದ ವಿವರದ ಪಟ್ಟಿಯನ್ನು ಇಲಾಖೆಯ ಅನುಮತಿ ಪಡೆದು ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಿದ ನಂತರವೇ ಪ್ರವೇಶ ಪಡೆದು ಶುಲ್ಕ ತಗೆದುಕೊಳ್ಳುವುದು ಕಡ್ಡಾಯವಾಗಿದೆ. ಆದರೆ ಇನ್ನೂವರೆಗೆ ಖಾಸಗಿ ಅನುದಾನ ರಹಿತ ಶಾಲೆಗಳು ಶುಲ್ಕ ಪಟ್ಟಿಯ ಅನುಮೋದನೆಗೆ ಇಲಾಖೆ ಕಚೇರಿಗೆ ಸಲ್ಲಿಸಿಲ್ಲ. ಯಾವುದೇ ಕಾರಣಕ್ಕೂ ಅನುಮೋದನೆ ಪಡೆಯದೇ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯುವಂತಿಲ್ಲ. ಈ ಬಗ್ಗೆ ದೂರುಗಳು ಬಂದರೆ ಮುಂದಿನ ಆಗುಹೋಗುಗಳಿಗೆ ತಾವೇ ಜವಾಬ್ದಾರರಾಗುತ್ತೀರಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-35-1002762913

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.