ಆಲ್ದೂರು: ಸಮೀಪದ ಸತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಗುಡಿಗೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2026- 27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲೆಯನ್ನು ಅಲಂಕರಿಸಿ, ತಳಿರು ತೋರಣ ಕಟ್ಟಲಾಗಿತ್ತು.

ಯಲಗುಡಿಗೆ ಶಾಲೆಯ ಹಳೇ ವಿದ್ಯಾರ್ಥಿಗಳು ಶಾಲಾ ಮಕ್ಕಳನ್ನು ಬ್ಯಾಂಡ್ ವಾದನದ ಮೂಲಕ ಬರಮಾಡಿಕೊಂಡರು.

ಶಾಲಾ ಶಿಕ್ಷಕರು, ಪೋಷಕರು ಮಕ್ಕಳ ಮೇಲೆ ಪುಷ್ಪ ವೃಷ್ಟಿ ಮಾಡಿ, ಬಲೂನ್ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ಶಾಲೆಗೆ ಬಂದ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ದಾನಿಗಳಿಂದ ಸಂಗ್ರಹಿಸಿದ ಶಾಲಾ ಬ್ಯಾಗ್, ನೋಟ್ ಪುಸ್ತಕ ವಿತರಿಸಲಾಯಿತು. ಶಾಲಾ ಬ್ಯಾಗ್ ಮತ್ತು ನೋಟ್ ಪುಸ್ತಕಗಳನ್ನು ನೀಡಿದ ದಾನಿಗಳು ಹಾಗೂ ದಾನ ಪಡೆಯುವಲ್ಲಿ ಶ್ರಮಿಸಿದ ಶಾಲಾಶಿಕ್ಷಕಿ ಗೀತಾ ಕೆ.ಎಚ್ ಅವರನ್ನು ಮುಖ್ಯಶಿಕ್ಷಕ ಪಿ. ಮಂಜಪ್ಪ ಅಭಿನಂದಿಸಿದರು.

ಶಾಲೆಯಲ್ಲಿ 2026- 27ನೇ ಶೈಕ್ಷಣಿಕ ಸಾಲಿನ ಮೊದಲ ಪೋಷಕ ಶಿಕ್ಷಕರ ಸಭೆ ನಡೆಯಿತು. ಈ ವರ್ಷ ಶಾಲೆಯಲ್ಲಿ ಕೈಗೊಳ್ಳಬಹುದಾದ ಶಾಲಾ ಅಭಿವೃದ್ಧಿ ಕಾರ್ಯಕ್ರಮಗಳು, ಶೈಕ್ಷಣಿಕ ಯೋಜನೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ ಲಕ್ಷ್ಮಿ ನಾಗರಾಜ್, ಪೋಷಕರಾದ ಮಮತಾ, ದುಷ್ಯಂತ, ಭಾರತಿ, ಸುನೀತ, ಇಂದ್ರೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-126-898090074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.