ಯಳಂದೂರು: ತಾಲ್ಲೂಕಿನ ಸರ್ಕಾರಿ ಶಾಲೆಗಳ ಆವರಣ ಮತ್ತು ಕೊಠಡಿಗಳ ಸ್ವಚ್ಛತಾ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ನೀಡಲಾಯಿತು.

ಸರ್ಕಾರಿ ಮತ್ತು ಅನುದಾನಿತ ಶಾಲೆ ಮತ್ತು ಕಾಲೇಜುಗಳ 90ಕ್ಕೂ ಹೆಚ್ಚಿನ ಪ್ರಾಥಮಿಕ ಪ್ರೌಢಶಾಲೆ ಮತ್ತು ಕೆಪಿಎಸ್ ಶಾಲೆಗಳಲ್ಲಿ ಮಕ್ಕಳನ್ನು ಸ್ವಾಗತಿಸಲು ಶಾಲೆಗಳನ್ನು ಶುಚಿಗೊಳಿಸಿ ಅಲಂಕರಿಸುವ ಕೆಲಸ ಆರಂಭವಾಯಿತು. ಬೇಸಿಗೆ ಅವಧಿಯಲ್ಲಿ ಶಾಲೆ ಆವರಣದಲ್ಲಿ ಬೆಳೆದಿದ್ದ, ಗಿಡಗಂಟಿ ತೆರವು ಗೊಳಿಸಿ, ಚರಂಡಿಗಳಲ್ಲಿ ಸಂಗ್ರಹವಾಗಿದ್ದ ಹೂಳನ್ನು ತೆಗೆಯಲಾಯಿತು. ಕೊಠಡಿಗಳಿಗೆ ಸುಣ್ಣಬಣ್ಣ ಬಳಿಯುವ ಕೆಲಸಕ್ಕೆ ವೇಗ ನೀಡಲಾಯಿತು. ಮಕ್ಕಳ ಬಿಸಿಯೂಟಕ್ಕೆ ಬಳಸುವ ತಟ್ಟೆ, ಲೋಟ ಗಳನ್ನು ಶುಚಿಗೊಳಿಸಿ ಜೋಡಿಸಲಾಯಿತು.ಜೂನ್ 1 ರಂದು ಶಾಲೆ ಪ್ರಾರಂಭ ಆಗಲಿದೆ. ರಜಾ ಅವಧಿ ಮುಗಿಸಿ ಬರುವ ಮಕ್ಕಳನ್ನು ಸ್ವಾಗತಿಸಬೇಕಿದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶೈಲಜಾ ಹೇಳಿದರು.

8ನೇ ತರಗತಿಗೆ ಮಕ್ಕಳನ್ನು ದಾಖಲಿಸಿಕೊಳ್ಳವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಪೋಷಕರು ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ದಾಖಲಿಸಲು ಒಲವು ತೋರಿದ್ದಾರೆ ಎಂದು ಶಿಕ್ಷಕ ಮಹೇಶ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-1171370502

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.