ಯಲಬುರ್ಗಾ: ಪಟ್ಟಣದ ಜನನಿ ಶಿಕ್ಷಣ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನವನ್ನು ಪೌಷ್ಟಿಕಾಂಶ ದಿನವನ್ನಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವೈದ್ಯಾಧಿಕಾರಿ ವಿವೇಕ ವಾಗ್ಲೆ ಮಾತನಾಡಿ, ‘ದೇಹದ ಉತ್ತಮ ಬೆಳವಣಿಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಪೌಷ್ಟಿಕಾಂಶ ಯುಕ್ತ ಆಹಾರ ಸೇವನೆ ಅತ್ಯವಶ್ಯಕ. ವಿಶೇಷವಾಗಿ ಮಹಿಳೆಯರು, ಬಾಣಂತಿಯವರು, ಗರ್ಭಿಣಿಯರು ಗುಣಮಟ್ಟದ ಪೋಷಕಾಂಶಗಳು ಇರುವ ಆಹಾರ ಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಮೂಲಕ ಹುಟ್ಟುವ ಮಗುವಿಗೂ, ಬೆಳೆಯುವ ಶಿಶುವಿಗೂ ವಿವಿಧ ರೀತಿಯಲ್ಲಿ ಪ್ರಯೋಜನ ದೊರೆಯುವುದರಿಂದ ಈ ಬಗ್ಗೆ ಹೆಚ್ಚಿನ ಗಮನ ಕೊಡುವುದು ಮುಖ್ಯವಾಗಿದೆ’ ಎಂದರು.

‘ಈ ಶಿಕ್ಷಣ ಸಂಸ್ಥೆಯಲ್ಲಿ ಪೌಷ್ಟಿಕಾಂಶ ಆಹಾರದ ಬಗ್ಗೆ ವಿಶೇಷ ಕಾರ್ಯಕ್ರಮ ಆಯೋಜಿಸುವ ಮೂಲಕ ಅರಿವು ಮೂಡಿಸುತ್ತಿರುವುದು ಸ್ವಾಹತಾರ್ಹವಾಗಿದೆ. ಯಾವ ಆಹಾರ ಪದಾರ್ಥಗಳಲ್ಲಿ ಎಷ್ಟೆಷ್ಟು ಅಂಶಗಳು ಉಪಯುಕ್ತವಾಗಿವೆ. ಅದರ ಬಳಕೆ ಹೇಗೆ ಎಂಬುದರ ಬಗ್ಗೆ ತಿಳಿಸುವ ಮೂಲಕ ಪೌಷ್ಟಿಕಾಂಶದ ಮೌಲ್ಯವನ್ನು ತಿಳಿಸಿಕೊಡುವ ಕೆಲಸ ಮಾಡಿದ್ದು ಮೆಚ್ಚುವಂಹತಹದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ರಂಗನಾಥ ವಲ್ಮಕೊಂಡಿ ಮಾತನಾಡಿ, ‘ಸಂಸ್ಥೆಯಲ್ಲಿ ಕಲಿಕೆ ಸಂಬಂಧಿಸಿದಂತೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಸೂಕ್ತ ಮಾರ್ಗದರ್ಶನದ ಜೊತೆಗೆ ಅಗತ್ಯ ತರಬೇತಿಯು ಕೊಡಲಾಗುತ್ತಿದೆ. ವಿಶೇಷವಾಗಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ತಜ್ಞ ವೈದ್ಯರ ಮೂಲಕ ಮಾಹಿತಿ ನೀಡುವುದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಪ್ರಯೋಜನ ಪಡೆದುಕೊಂಡರೆ ಸಾರ್ಥಕವಾಗುತ್ತದೆ’ ಎಂದರು.

ಪ್ರಾಚಾರ್ಯ ಪ್ರಾಣೇಶ, ಆಡಳಿತಾಧಿಕಾರಿ ಲೋಕೇಶ ಲಮಾಣಿ, ವೈದ್ಯರಾದ ರಮೇಶ, ಗುರುರಾಜ, ಮಂಜುಳಾ, ಮುಖ್ಯೋಪಾಧ್ಯಾಯ ಅಕ್ಷಯಕುಮಾರ ಪತ್ತಾರ ಸೇರಿ ಅನೇಕರು ಅತಿಥಿಗಳಾಗಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-35-1991998467

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.