ಅಳ್ನಾವರ: ದೇಶದ ಭವಿಷ್ಯ ರೂಪಿಸಬೇಕಾದ ಯುವಜನತೆ ದುಶ್ಚಟಗಳಿಗೆ ಬಲಿಯಾಗಿ, ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗಂಭೀತ ಚಿಂತನೆ ಮಾಡದಿದ್ದರೆ ಸಮಾಜ ಅವ್ಯವಸ್ಥೆಯತ್ತ ಸಾಗುವ ಸಾಧ್ಯತೆ ಇದೆ’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸಂಜೀವ ಕುಲಕರ್ಣಿ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪದಿಂದ ಮಂಗಳವಾರ ಆಯೋಜಿಸಿದ್ದ ‘ಹದಿ ಹರೆಯದವರ ಸಮಸ್ಯೆಗಳು ಮತ್ತು ಪರಿಹಾರ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯುವಜನರು ಪ್ರೀತಿಯ ಕನಸುಗಳಲ್ಲೇ ಮುಳುಗದೆ, ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತೆ ದೊಡ್ಡ ಕನಸುಗಳನ್ನು ಕಾಣಬೇಕು. ಸಮಾಜಮುಖಿ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ‘ಯುವಸಮೂಹ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಸಬಲ ದೇಶ ಕಟ್ಟಲು ಸಾಧ್ಯ. ದೇಶದ ಜನಸಂಖ್ಯೆಯಲ್ಲಿ ಬಹುಪಾಲು ಯುವಕರೇ ಇದ್ದಾರೆ. ಹದಿಹರೆಯದಲ್ಲಿ ಚಂಚಲತೆ ಸಹಜವಾದರೂ, ಅವರನ್ನು ಸರಿದಾರಿಯಲ್ಲಿ ನಡೆಸಿದಾಗ ಮಾತ್ರ ಸಮಗ್ರ ಬದಲಾವಣೆ ಸಾಧ್ಯ’ ಎಂದರು.

ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಉಮಾ ಪೂಜಾರ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಮಂಟಪದ ಶಿವಾನಂದ ಭಾವಿಕಟ್ಟಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜ ಸಬನೀಸ, ಆರ್.ಬಿ. ಸೋನೆಖಾನ್, ಪರ್ವಿನ್ ಶೇಖ, ಸುರೇಶ ದೊಡಮನಿ, ಅಶ್ವಿನಿ ನಿಪ್ಪಾಣಿ, ಸುಮಾ ಸಾವಂತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-24-316733591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.