ಅಫಜಲಪುರ: ‘ಸ್ಪರ್ಧಾತ್ಮಕ ಯುಗದಲ್ಲಿ ದಿನಕ್ಕೊಂದು ಹೊಸತನ ಹುಟ್ಟಿಕೊಳ್ಳುತ್ತದೆ. ಹೀಗಾಗಿ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು’ ಎಂದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಪ್ರವೀಣ ಹೇರೂರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಉದ್ಯೋಗ ಭರವಸೆ ಕೋಶಗಳ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ ಕುರಿತಾಗಿ ನಡೆದ ಒಂದು ದಿನದ ಪ್ರಾತ್ಯಕ್ಷಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಓದುವಾಗ ಶೃದ್ಧೆಯಿಂದ ಓದಿ, ಜವಾಬ್ದಾರಿ ಹೆಗಲೇರುವ ಸಂದರ್ಭದಲ್ಲೊಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವತ್ತ ಚಿತ್ತ ನೆಡಿ. ಅಲ್ಲಿಯ ತನಕ ದುಶ್ಚಟಗಳಿಂದ ದೂರವಿರಿ. ಅಂತರ್ಜಾಲದ ಸದ್ಬಳಕೆ ಮಾಡಿಕೊಂಡು ಬದುಕು ರೂಪಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಸಂತೋಷ ಹುಗ್ಗಿ, ಸಾವಿತ್ರಿ ಕೃಷ್ಣ ಮಾತನಾಡಿದರು.

ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿದಾರ ಸಿದ್ಧಾರ್ಥ ವಿಶ್ವಕರ್ಮ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮಾದರಿ ಪ್ರಶ್ನೆ ಪತ್ರಿಕೆ ನೀಡಿ ಹೆಚ್ಚಿನ ಮಾಹಿತಿ ನೀಡಿದರು.

ಎನ್ಎಸ್ಎಸ್ ಅಧಿಕಾರಿ ಶಾಂತಲಾ ಎ.ಸಿ, ಮಹ್ಮದ್ ಯೂನುಸ್, ಚಿನ್ನಾ ಆಶೆಪ್ಪ, ದತ್ತಾತ್ರೇಯ ಸಿ.ಎಚ್, ವಿನಾಯಕ, ಪ್ರವೀಣ ಸೇಡಂಕರ್, ಭಾರತಿ ಭೂಸಾರೆ, ರಾಘವೇಂದ್ರ, ಶಾಂತಪ್ಪ ಮೇಲ್ಕೇರಿ, ಕವಿತಾ ರಾಠೋಡ, ಸಂತೋಷ ಬಡಿಗೇರ, ಗಿರಿಜಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-31-2071577120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.