ಅರಸೀಕೆರೆ: ‘ಪದವಿ ಹಂತದಲ್ಲಿರುವಾಗಲೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಕಡೆ ಒಲವು ತೋರಬೇಕು. ಯಶಸ್ಸು ಗಳಿಸಲು ಪೂರ್ವ ತಯಾರಿ ಅಗತ್ಯ’ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.

ನಗರದ ವೆಂಕಟೇಶ್ವರ ಕಲಾಭವನದಲ್ಲಿ ರಾಯಲ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಕಾಲೇಜು ವತಿಯಿಂದ ನಡೆದ ಪದವಿ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪೂರ್ವಸಿದ್ಧತೆ, ಕಠಿಣ ಪರಿಶ್ರಮ ಹಾಗೂ ತಿಳಿದುಕೊಂಡಿದ್ದನ್ನು ಅಭಿವ್ಯಕ್ತಿಸುವ ರೀತಿ ನಿಮ್ಮನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯುತ್ತವೆ. ಸ್ಪರ್ಧೆಯಿಂದ ಯಾರೂ ದೂರ ಉಳಿಯಬಾರದು’ ಎಂದರು.

ಕೆಪಿಸಿಸಿ ಸದಸ್ಯ ಶಶಿಧರ್ ಮಾತನಾಡಿ, ‘ಶ್ರಮ ವಹಿಸಿ ಸಾಧನೆ ಮಾಡಿ ಪೋಷಕರ ಕನಸು ನನಸಾಗುವಂತೆ ಮಾಡಬೇಕು’ ಎಂದು ಹೇಳಿದರು.

ಪ್ರಾಂಶುಪಾಲ ಕೆ.ಎಸ್. ಮಂಜುನಾಥ್ ಮಾತನಾಡಿ, ‘ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಸಮಯವನ್ನು ವ್ಯರ್ಥ ಮಾಡದೇ ಓದಿನಲ್ಲಿ ಮಗ್ನರಾಗಿ ನಿಶ್ಚಿತ ಗುರಿ ತಲುಪಬೇಕು’ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮ ಗಮನಸೆಳೆಯಿತು. ಅಂತಿಮ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ಕಾಲೇಜಿನ ಕಾರ್ಯದರ್ಶಿ ಉಷಾ ಬೋಪಯ್ಯ, ಯುವ ಮುಖಂಡರಾದ ನವೀನ್, ಪೃಥ್ವಿನಾಯಕ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-586236310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.