ಬಾಗಲಕೋಟೆ: ಬಸವೇಶ್ವರ ಎಂಜಿನಿಯರಿಂಗ್ ಕಾಲೇಜು ಹಾಗೂ ಕೆಇಎ ಸಹಯೋಗದಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಿಗೆ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ಮೇ 25ರಿಂದ 30ರ ವರೆಗೆ ‘ಯುಜಿಸಿಇಟಿ ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೇ 25ರಂದು ಬೆಳಿಗ್ಗೆ 10ಕ್ಕೆ ಕಾಲೇಜಿನ ಗ್ಯಾಲರಿ ಹಾಲ್ನಲ್ಲಿ ಉದ್ಘಾಟನೆ ನಡೆಯಲಿದ್ದು, ಕಾಲೇಜಿನ ಪ್ರಾಚಾರ್ಯ ಬಿ.ಆರ್. ಹಿರೇಮಠ ಅಧ್ಯಕ್ಷತೆ ವಹಿಸಲಿದ್ದು, ಬಿವಿವಿಎಸ್ ತಾಂತ್ರಿಕ ಶಿಕ್ಷಣ ನಿರ್ದೇಶಕ ಆರ್.ಎನ್. ಹೆರಕಲ್ ಉಪಸ್ಥಿತರಿರಲಿದ್ದಾರೆ.

ಕೆಇಎ ವತಿಯಿಂದ ತರಬೇತಿ ಶಿಬಿರದಲ್ಲಿ ತಜ್ಞರಾದ ಸಂತೋಷ ಕುಂಬಳಾವತಿ, ಎಸ್.ಜಿ. ಕಂಬಾಳಿಮಠ ಹಾಗೂ ಅಶೋಕ ಸುತಗುಂಡಾರ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-19-494650646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.