ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2026– 27ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2026ರ ಮೇ 2ರಿಂದ 2027 ರ ಫೆ.28 ರ ವರೆಗೆ ಒಟ್ಟು 10 ತಿಂಗಳ ತರಬೇತಿ ನೀಡಲಾಗುತ್ತದೆ.

ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಇವರ ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಭರ್ತಿಮಾಡಿದ ಅರ್ಜಿಗಳನ್ನು ಏಪ್ರಿಲ್ 20 ರೊಳಗಾಗಿ ತೋಟಗಾರಿಕೆ ಜಂಟಿ ನಿರ್ದೇಶಕರು ಹಾಗೂ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಏಪ್ರಿಲ್ 23 ರಂದು ಬೆಳಿಗ್ಗೆ 11 ಗಂಟೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278588 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-25-1965078515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.