ಬೆಳ್ತಂಗಡಿ: ಗೋಪಾಲಕೃಷ್ಣ ಸೇವಾ ಟ್ರಸ್ಟ್ ನೇತೃತ್ವ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ನಾವೂರು ಸರ್ವೋದಯ ಟ್ರಸ್ಟ್ ಸಹಭಾಗಿತ್ವದಲ್ಲಿ ನಾವೂರು ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಾವೂರು ಈಚೆಗೆ ಎಸ್ಎಸ್ಎಲ್ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಅವಕಾಶಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಕಾರ್ಯಾಗಾರ ಉದ್ಘಾಟಿಸಿ, ‘ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಥ ಕಾರ್ಯಕ್ರಮಗಳು ಅತ್ಯವಶ್ಯ. ವಿದ್ಯಾರ್ಥಿಗಳು ಈ ಮಾಹಿತಿ ಪಡೆದು ಬದುಕನ್ನು ಉತ್ತಮವಾಗಿ ರೂಪುಗೊಳಿಸಬೇಕು’ ಎಂದರು.

ನಾವೂರು ಗೋಪಾಲಕೃಷ್ಣ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮೋರ್ತಾಜೆ ಮಾತನಾಡಿ, ದೇವಸ್ಥಾನದ ಸೇವಾ ಟ್ರಸ್ಟ್ ಮೂಲಕ ಧಾರ್ಮಿಕ ಕಾರ್ಯಕ್ರಮಗಳ ಜತೆಗ ಸಾಮಾಜಿಕ, ಸೇವಾ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಆ ಮೂಲಕ ಸಾಮಾಜಿಕ ಪರಿವರ್ತನೆಯ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದೇವೆ ಎಂದರು.

ಸಂಪನ್ಮೂಲ ವ್ಯಕ್ತಿ ಎಸ್ಡಿಎಂ ವಸತಿ ಪಿಯು ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿಯ ಕ್ಷೇತ್ರವನ್ನು ಆರಿಸಿಕೊಳ್ಳುವ ಜಾಣತನವನ್ನು ಬೆಳೆಸಿಕೊಳ್ಳಬೇಕು. ಸರಿಯಾದ ಆಯ್ಕೆ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಅವಶ್ಯ. ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದರು.

ನಾವೂರು ಪ್ರೌಢ ಶಾಲೆ ಮುಖ್ಯಶಿಕ್ಷಕ ರಾಜೇಂದ್ರ ಭಟ್, ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮುಖ್ಯಶಿಕ್ಷಕಿ ಜಾಕಿನ್ ಬಿನ್ ಸೆರಾವೊ ಮಾತನಾಡಿದರು.

ನಾವೂರು ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಪೂರ್ವಾಧ್ಯಕ್ಷ ಎ.ಬಿ. ಉಮೇಶ್ ಅತ್ಯಡ್ಕ, ಟ್ರಸ್ಟಿಗಳಾದ ಗಣೇಶ್ ಕನಾಲು, ತಿಮ್ಮಪ್ಪ ಜಿ., ಹರೀಶ್ ಕಾರಿಂಜ, ಕೋಶಾಧಿಕಾರಿ ಉಮೇಶ್ ಪ್ರಭು, ಸಂಚಾಲಕ ಕೆ.ಮೋಹನ್ ಬಂಗೇರ ಕಾರಿಂಜ, ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಹಿರಿಯ ಪ್ರಬಂಧಕ ಸೂರ್ಯನಾರಾಯಣ ಭಟ್, ಮಹಿಳಾ ಸಮಿತಿ ಅಧ್ಯಕ್ಷೆ ಪ್ರಿಯಾ ಲಕ್ಷ್ಮಣ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗೌಡ ದೇರ್ಲೆಕ್ಕಿ ಭಾಗವಹಿಸಿದ್ದರು.

ನಾವೂರು ಆರೋಗ್ಯ ಕ್ಲಿನಿಕ್ನ ಡಾ.ಪ್ರದೀಪ್ ಸ್ವಾಗತಿಸಿ, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಕೆ.ಧರ್ಣಪ್ಪ ಮೂಲ್ಯ ನಿರೂಪಿಸಿದರು. ಗಣೇಶ್ ಗೌಡ ನೆಲ್ಲಿಪಲ್ಕೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-1309005610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.