ಬೆಂಗಳೂರು: ಗೀತಂ ಡೀಮ್ಡ್ ವಿಶ್ವವಿದ್ಯಾಲಯವು 2026–27ನೇ ಶೈಕ್ಷಣಿಕ ಸಾಲಿಗೆ ವಿವಿಧ ಪದವಿ (ಯುಜಿ) ಹಾಗೂ ಸ್ನಾತಕೋತ್ತರ ಪದವಿ (ಪಿಜಿ) ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿ ಬೆಂಗಳೂರು ಕ್ಯಾಂಪಸ್ನ ಸಹ ಕುಲಪತಿ ಬಸವರಾಜ ಜಿ.ಕಟಗೇರಿ, ‘ಪ್ರಸಕ್ತ ಸಾಲಿನ ಪ್ರವೇಶಾತಿಯಲ್ಲಿ ವಿದ್ಯಾರ್ಥಿಗಳಿಗೆ ಹಲವು ವಿಶೇಷ ಸವಲತ್ತುಗಳನ್ನು ಕಲ್ಪಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸ ಲಾಗುತ್ತದೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರವಾಗಿ ಪದವಿ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಬಹುದು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನ ಘೋಷಿಸಲಾಗಿದೆ. ಸ್ನಾತಕೋತ್ತರ ಕೋರ್ಸ್ಗಳಿಗೆ ಸೇರಬಯಸುವ ಅಭ್ಯರ್ಥಿಗಳಿಗೆ ಅವರ ಪದವಿ ಅಂಕಗಳ ಆಧಾರದ ಮೇಲೆ ಪ್ರವೇಶಾತಿ ಕಲ್ಪಿಸಲಾಗುತ್ತದೆ’ ಎಂದರು.

‘ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿದ್ದು, ಜೂನ್ 14ರಂದು ಗ್ಯಾಟ್ ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರವೇಶಾತಿ ಬಯಸುವ ಮತ್ತು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಗೀತಂ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬೇಕು. ಗೀತಂ ಪ್ರವೇಶ ಪರೀಕ್ಷೆಯು (ಗ್ಯಾಟ್) ರಾಷ್ಟ್ರಮಟ್ಟದ ಪರೀಕ್ಷೆಯಾಗಿದ್ದು, ಗೀತಂ ತನ್ನ ವಿವಿಧ ಕ್ಯಾಂಪಸ್ಗಳ ಪ್ರವೇಶಾತಿಗೆ ಈ ಪರೀಕ್ಷೆ ನಡೆಸಲಿದೆ’ ಎಂದು ಹೇಳಿದರು.

‘ಈ ಪರೀಕ್ಷೆಯನ್ನು ಆನ್ಲೈನ್ ಮೂಲಕ ನಡೆಸಲಾಗುತ್ತದೆ. ದೇಶದಾದ್ಯಂತ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಜೆಇಇ, ಸಿಯುಇಟಿ, ಕ್ಯಾಟ್ ಅಥವಾ ಇತರೆ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳು ಗ್ಯಾಟ್ ಪರೀಕ್ಷೆಗೆ ಹಾಜರಾಗದೆ ನೇರವಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ’ ಎಂದು ವಿವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-4-407436483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.