ಭಾಲ್ಕಿ: ‘ದೇಶ, ವಿದೇಶಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್ ವೃತ್ತಿಗೆ ಅಪಾರ ಬೇಡಿಕೆ ಇದೆ’ ಎಂದು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸುರೇಂದ್ರನ್ ಆರ್. ಹೇಳಿದರು.

ಚನ್ನಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಿ.ಎ ಫೌಂಡೇಶನ್ ಪ್ರವೇಶ ಹಾಗೂ ವಿದ್ಯಾರ್ಥಿ ವೇತನ ಪರೀಕ್ಷೆಯ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಕಲಿಕೆಯಲ್ಲಿ ತನ್ಮಯರಾಗಿ ತಾವು ಆಯ್ಕೆ ಮಾಡಿಕೊಂಡಿರುವ ಕೋರ್ಸ್ಗಳಲ್ಲಿ ವಿಶೇಷ ಪ್ರಾಬಲ್ಯತೆಯನ್ನು ಸಾಧಿಸಬೇಕು. ತಮ್ಮಲ್ಲಿರುವ ವಿಶೇಷ ಕೌಶಲಗಳನ್ನು ಹೆಚ್ಚೆಚ್ಚು ಅಭಿವೃದ್ಧಿಪಡಿಸಿಕೊಂಡು ಸಿಎ ವೃತ್ತಿಯಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಚಾರ್ಟೆಡ್ ಅಕೌಂಟೆಂಟ್ ಸುಮಿತ್ ಆರ್. ಭರಾಡಿಯಾ ಅವರು ತಮ್ಮ ವಿಶೇಷ ಉಪನ್ಯಾಸದಲ್ಲಿ ಸಿ.ಎ. ಕೋರ್ಸ್ನ ಹಂತಗಳು, ಉದ್ಯೋಗಾವಕಾಶಗಳು, ಆದಾಯದ ಸಾಧ್ಯತೆಗಳು ಹಾಗೂ ಜಾಗತಿಕ ಅವಕಾಶಗಳ ಕುರಿತು ವಿವರಿಸಿದರು.

ಪ್ರಾಚಾರ್ಯ ಸಂತೋಷಕುಮಾರ ಎಸ್.ತೀರ್ಥೆ, ಸಿ.ಎ ಸಂಯೋಜಕ ಸಂದೀಪರಾಜ್ ಮಾತನಾಡಿದರು. ವಿಠ್ಠಲರಾವ್ ಪಾಟೀಲ, ಶಿವಕುಮಾರ್ ಜೆ. ಕಾಂಬಳೆ ಸೇರಿದಂತೆ ಇತರರು ಇದ್ದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ಸುಮಾರು 150 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-33-1537618244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.