ಬೀದರ್: 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಸ್ವೀಕೃತಿ ದಿನಾಂಕವನ್ನು ವಿಸ್ತರಿಸಲಾಗಿದೆ.

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಕಲಬುರಗಿ ಇಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು NIC (https://kalaburagi.nic.in) ವೆಬ್ಸೈಟ್ನಲ್ಲಿ ಆಹ್ವಾನಿಸಲಾಗಿತ್ತು. ಆದರೆ, ಅನೇಕ ಅಭ್ಯರ್ಥಿಗಳು ಕರೆ ಮಾಡಿ ಅರ್ಜಿ ಸ್ವೀಕೃತಿ ದಿನಾಂಕವನ್ನು ವಿಸ್ತರಿಸುವ ಮನವಿ ಮಾಡುತ್ತಿರುವುದರಿಂದ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಮೇ 30ರ ವರೆಗೆ ವಿಸ್ತರಿಸಲಾಗಿದೆ.ಹಾಲ್ ಟಿಕೆಟ್ ದಿನಾಂಕ ಹಾಗೂ ಪರೀಕ್ಷಾ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-33-1361789629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.