ಚಿದ್ರಿ(ಜನವಾಡ): ‘ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಳ್ಳಬೇಕು’ ಎಂದು ಬೆಂಗಳೂರಿನ ರಾಕುಮ್ ಮಹಾರಾಜ ಹೇಳಿದರು.

ಬೀದರ್ ತಾಲ್ಲೂಕಿನ ಚಿದ್ರಿಯ ಜಾಗೃತಿ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪರಿಶ್ರಮದಿಂದ ಅಂದುಕೊಂಡ ಗುರಿ ತಲುಪಬಹುದು. ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದ ಸವಾಲುಗಳನ್ನು ಎದುರಿಸಲು ಅಣಿಯಾಗಬೇಕು. ನೈತಿಕತೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.

ಶಾಲೆಯ ಅಧ್ಯಕ್ಷ ತುಕಾರಾಮ ಚಿಮಕೋಡೆ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಶಿಕ್ಷಕರು ಇದ್ದರು.

ಶಾಲೆಯ ಕಾರ್ಯದರ್ಶಿ ಶಿಲ್ಪಾ ತುಕಾರಾಮ ಚಿಮಕೋಡೆ ಸ್ವಾಗತಿಸಿದರು. ಶಿಕ್ಷಕಿ ಮಹಾದೇವಿ ನಿರೂಪಿಸಿದರು. ಶಿಕ್ಷಕಿ ಸವಿತಾ ಶಹಾಪುರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-33-2059702465

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.