ಬೀದರ್: ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ನಗರದ ಶಹಾಪುರ ಗೇಟ್ ಸಮೀಪದ ಶಾಹೀನ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ಮಾರ್ಗದರ್ಶನ ಮೇಳವುವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣದ ಕುರಿತು ಮಾಹಿತಿ ಒದಗಿಸಿತು.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ನಂತರ ಇರುವ ಕೋರ್ಸ್ಗಳು, ಅವುಗಳಿಗೆ ಅವಶ್ಯಕ ಅರ್ಹತೆ, ಕೋರ್ಸ್ ಮುಗಿಸಿದ ನಂತರ ಸಿಗುವ ಉದ್ಯೋಗ ಅವಕಾಶಗಳ ಕುರಿತು ವಿವಿಧ ಕಾಲೇಜುಗಳ ಮುಖ್ಯಸ್ಥರು ಮಾಹಿತಿ ಒದಗಿಸಿದರು.

ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್, ಪಶು ವೈದ್ಯಕೀಯ, ಕೃಷಿ, ರೇಷ್ಮೆ, ತೋಟಗಾರಿಕೆ, ಮೀನುಗಾರಿಕೆ ವಿಜ್ಞಾನ, ಎಂಜಿನಿಯರಿಂಗ್, ಪಾಲಿಟೆಕ್ನಿಕ್, ಐಟಿಐ, ಪ್ಯಾರಾ ಮೆಡಿಕಲ್ ಮೊದಲಾದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಬಹುದು ಎಂದು ವಿವರಿಸಿದರು.

ವೃತ್ತಿ ಶಿಕ್ಷಣ ಮಾಹಿತಿಗೆ ಸಂಬಂಧಿಸಿದಂತೆ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಎಂಜಿನಿಯರಿಂಗ್ ಕಾಲೇಜು, ಪಶು ವೈದ್ಯಕೀಯ ಕಾಲೇಜು, ತೋಟಗಾರಿಕೆ ಕಾಲೇಜು, ಡಯಟ್, ಸರ್ಕಾರಿ ಪಾಲಿಟೆಕ್ನಿಕ್, ಕೈಗಾರಿಕಾ ತರಬೇತಿ ಸಂಸ್ಥೆ ಸೇರಿದಂತೆ ವಿವಿಧ ಕಾಲೇಜುಗಳ 20 ಮಳಿಗೆಗಳನ್ನು ಹಾಕಲಾಗಿತ್ತು. ಅಧ್ಯಯನಕ್ಕೆ ಲಭ್ಯ ಇರುವ ಕೋರ್ಸ್ಗಳ ಸಮಗ್ರ ಮಾಹಿತಿಯ 100 ಫಲಕಗಳನ್ನು ಇಡಲಾಗಿತ್ತು. ಜಿಲ್ಲೆಯ ವಿವಿಧ ಪ್ರೌಢಶಾಲೆ ಹಾಗೂ ಕಾಲೇಜುಗಳ 8ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳು ಮೇಳದಲ್ಲಿ ಪಾಲ್ಗೊಂಡಿದ್ದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್ ಉದ್ಘಾಟಿಸಿ, ‘ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿನಂತರ ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ವೈದ್ಯಕೀಯ, ಎಂಜಿನಿಯರಿಂಗ್ ಜೊತೆಗೆ ಅಧ್ಯಯನಕ್ಕೆ ಹಲವಾರು ಕೋರ್ಸ್ಗಳು ಇವೆ’ ಎಂದು ತಿಳಿಸಿದರು.

ಡಯಟ್ ಪ್ರಾಚಾರ್ಯ ಮುಹಮ್ಮದ್ ಗುಲ್ಸೀನ್ ಮಾತನಾಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಜಿ. ಸುರೇಶ್ ಮತ್ತಿತರರು ಇದ್ದರು.

ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಪ್ರಾರ್ಥನೆ ಗೀತೆ ಹಾಡಿದರು. ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಸೈಯದ್ ಫುರಖಾನ್ ಪಾಶಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-33-2084198347

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.