ಬ್ರಹ್ಮಾವರ: ಬಾರ್ಕೂರು ಎಜುಕೇಷನಲ್ ಸೊಸೈಟಿ ಹಾಗೂ ಕುಂದಾಪುರದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಸಹಯೋಗದಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಏ. 5ರಂದು ಬೆಳಿಗ್ಗೆ 9.30ಕ್ಕೆ ಬಾರ್ಕೂರು ಸುಜ್ಞಾನ್ ನ್ಯಾಷನಲ್ ಪಿಯು ಕಾಲೇಜಿನಲ್ಲಿ ವಿಶೇಷ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ ಎಂದು ರಮೇಶ್ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ತನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ಸಾಧನೆ ಮಾಡಿದವರಿಗೆ ಕಾಲೇಜು ಶುಲ್ಕದಲ್ಲಿ ಶೇ 75ರಷ್ಟು ರಿಯಾಯಿತಿ ನೀಡಲಾಗುವುದು. ಆರ್ಥಿಕವಾಗಿ ತೀರಾ ಹಿಂದುಳಿದ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲು ಸಂಸ್ಥೆ ಬದ್ಧವಿದೆ ಎಂದರು.

ಈ ಸಾಲಿನಲ್ಲಿ ಎಸ್ಎಸ್ಎಲ್ಸಿ, ಸಿಬಿಎಸ್ಸಿ ಅಥವಾ ಐಸಿಎಸ್ಸಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಭಾಗವಹಿಸಬಹುದು. ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಪೆನ್, ಪೆನ್ಸಿಲ್ ತರತಕ್ಕದ್ದು. ಪ್ರಶ್ನೆಗಳು ಎಸ್ಎಸ್ಎಲ್ಸಿ ಪಠ್ಯಕ್ರಮದ ಆಧಾರದಲ್ಲಿರುತ್ತವೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಾರ್ಕೂರು ಎಜುಕೇಷನಲ್ ಸೊಸೈಟಿ ಅಧ್ಯಕ್ಷ ಬಿ. ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ, ರಾಜಾರಾಮ ಶೆಟ್ಟಿ, ಬಿ. ರಾಮಚಂದ್ರ ಕಾಮತ್, ರಾಜ್ ಗೋಪಾಲ್ ನಂಬಿಯಾರ್, ಎಸ್. ಜಯರಾಮ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-28-1723958068

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.