ಬುಕ್ಕಾಪಟ್ಟಣ (ಶಿರಾ): ಇಂದಿನ ಪರಿಶ್ರಮದ ಜೀವನವೇ ಮುಂದಿನ ಯಶಸ್ಸಿನ ಗುಟ್ಟಾಗಿದೆ. ಪ್ರತಿಯೊಬ್ಬರೂ ಪರಿಶ್ರಮದಿಂದ ಸಾಧನೆಯತ್ತ ಮುಖ ಮಾಡಬೇಕು ಎಂದು ಪ್ರಾಂಶುಪಾಲೆ ಪ್ರೊ.ಧರಣೇಂದ್ರ ಕುಮಾರಿ ಹೇಳಿದರು.

ತಾಲ್ಲೂಕಿನ ಬುಕ್ಕಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಗುರುವಾರ ಪ್ಲೇಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಒಂದು ನಿರ್ದಿಷ್ಟ ವಿಷಯದಲ್ಲಿ ಮಾತ್ರ ತಿಳಿದುಕೊಳ್ಳದೆ ಸರ್ವತೋಮುಖ ಜ್ಞಾನಾರ್ಜನೆಗೆ ಒತ್ತು ನೀಡಬೇಕು. ಕಲಾ ಮಾಧ್ಯಮ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಅತ್ಯುತ್ತಮ ವೇದಿಕೆಯಾಗಿದ್ದು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.

ಪ್ಲೇಸ್ಮೆಂಟ್ ಸೆಲ್ ಸಂಚಾಲಕ ಸತೀಶ್ ಎ.ಎಂ., ಪದವಿ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಸಹಾಯಕ ಪ್ರಾಧ್ಯಾಪಕ ಲೋಕೇಶ್ ಎನ್., ಮಹೇಶ್ ಎನ್. ಮಾತನಾಡಿದರು.

ಡಾ. ಹನುಮಂತರಾಯ ಎಸ್.ಆರ್., ವಿಜಯ್ ಎನ್., ಶಾರ್ವರಿ ಎಸ್.ಕೆ., ನರೇಂದ್ರ ಬಾಬು, ನಾಗರಾಜ ರಾವ್, ಕುಮಾರ್ ಜಿ.ಸಿ., ಶ್ರೀನಿವಾಸ್ ಜಿ.ಸಿ., ಜಗದೀಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-17-718598213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.