ಚಾಮರಾಜನಗರ: ಕೃಷಿ ವಿಶ್ವವಿದ್ಯಾಲಯಗಳಲ್ಲಿ ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಸೇರಿದಂತೆ 12 ಕೋರ್ಸುಗಳ ಪ್ರವೇಶಕ್ಕಾಗಿ ರೈತರ ಮಕ್ಕಳಿಗೆ ಕೃಷಿಕರ ಕೋಟಾದಡಿ ಶೇ 50ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಮೀಸಲಾತಿ ಪಡೆಯಲು ಕೆಸಿಇಟಿ ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳು ನಡೆಸುವ ಪ್ರಾಯೋಗಿಕ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಈ ಹಿನ್ನೆಲೆಯಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಉದ್ದೇಶದಿಂದ ಏ.18ರಂದು ಚಾಮರಾಜನಗರದಲ್ಲಿರುವ ನಂದಿ ಅಕಾಡೆಮಿಯಲ್ಲಿ ವಿಕಸಿತ್ 47 ಅಕಾಡೆಮಿ ವತಿಯಿಂದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಕಾರ್ಯಾಗಾರದಲ್ಲಿ ಪರೀಕ್ಷೆಯ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು. ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಕೆಸಿಇಟಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಯೋಜಕರು ತಿಳಿಸಿದ್ದಾರೆ. ನೆರೆಯ ಜಿಲ್ಲೆಗಳ ವಿದ್ಯಾರ್ಥಿಗಳೂ ಸಹ ಭಾಗವಹಿಸಬಹುದು.

ಕಾಲೇಜುಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳನ್ನು ಕಾರ್ಯಾಗಾರದಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು ಎಂದು ಅಕಾಡೆಮಿಯ ಮುಖ್ಯಸ್ಥ ತೇಜಸ್ ಎಚ್.ಎನ್ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-37-1421264057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.