ಚಾಮರಾಜನಗರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉದ್ಯೋಗ ಮಾರ್ಗದರ್ಶನ ಕೋಶ ಮತ್ತು ಐ.ಕ್ಯೂ.ಎ.ಸಿ ಸಹಭಾಗಿತ್ವದಲ್ಲಿ ತಾಲ್ಲೂಕಿನ ಭೋಗಾಪುರ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಸಂಚಾರಿ ನೋಂದಣಿ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪಿ.ದೇವರಾಜು ಮಾತನಾಡಿ ‘ವಿದ್ಯಾರ್ಥಿಗಳು ಆಸಕ್ತಿಯ ಕ್ಷೇತ್ರವನ್ನು ಆಯ್ಕೆಮಾಡಿಕೊಂಡು ಸ್ಪಷ್ಟವಾದ ಗುರಿಯೊಂದಿಗೆ ಪರಿಶ್ರಮ ಹಾಕಿದಾಗ ಮಾತ್ರ ಯಶಸ್ಸು ಲಭಿಸುತ್ತದೆ’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕ ಮಹಾದೇವಸ್ವಾಮಿ ಕೌಶಲ ಮತ್ತು ವೃತ್ತಿ ಮಾರ್ಗದರ್ಶನ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಕಾರ್ಡ್ ನೋಂದಣಿಗಾಗಿ ಅರ್ಜಿ ಸ್ವೀಕರಿಸಲಾಯಿತು

ಕಾರ್ಯಕ್ರಮದ ಸಂಯೋಜಕ ಗಿರೀಶ್ ಟಿ.ಆರ್, ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿ ಪಡೆಯುವುದರ ಜೊತೆಗೆ ಕೌಶಲ ಅಭಿವೃದ್ಧಿಪಡಿಸಿಕೊಳ್ಳಬೇಕು, ಶಿಕ್ಷಣ ಜ್ಞಾನ ನೀಡುತ್ತದೆ, ಆದರೆ ವೃತ್ತಿ ಆಯ್ಕೆ ಜೀವನದ ದಿಕ್ಕನ್ನು ನಿರ್ಧರಿಸುತ್ತದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಚಾಲಕ ರಂಗಸ್ವಾಮಿ, ಪ್ರೊ.ನಂಜುಂಡಯ್ಯ, ರಮೇಶ್ ಬಾಬು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-37-667690471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.