ಚಾಮರಾಜನಗರ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಿಎಸ್ಐ ರಾಜ್ಯ ಸಮಿತಿ ಸಂಘ ನಾಯಕ್ ಬಂತೇಜಿ ಕಲ್ಯಾಣ ಸಿರಿ ಕರೆ ನೀಡಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸ್ಫೂರ್ತಿ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜ್ಞಾನ ದೇಗುಲ ಕೋಚಿಂಗ್ ಸೆಂಟರ್ ಉದ್ಘಾಟನೆ ಹಾಗೂ ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ ‘ವಿದ್ಯಾರ್ಥಿಗಳು ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಯಂತಹ ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡಲು ತರಬೇತಿ ಕೇಂದ್ರಗಳು ಅತ್ಯಗತ್ಯ ಎಂದರು.

ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೃತಿಗಳನ್ನು ಅಧ್ಯಯನ ಮಾಡಿ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಕ್ಷಕ ಕೆಂಪರಾಜು, ಚಾಮರಾಜನಗರ ವಿವಿ ಕನ್ನಡ ವಿಭಾಗ ಮುಖ್ಯಸ್ಥ ಡಾ.ಬಿ.ಮಹೇಶ್ ಬಾಬು, ಪಾಧ್ಯಾಪಕ ಮಹೇಶ್, ಚಿನ್ನಸ್ವಾಮಿ, ಗುರುರಾಜ್, ನಿವೃತ ಉಪನ್ಯಾಸಕ ಎಚ್.ಮುನಿಸ್ವಾಮಿ, ಜಿ.ಬಂಗಾರು, ಎಸ್.ದಿವ್ಯಾ, ದರ್ಶನಿ, ಕಾವ್ಯಾ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-37-1328207716

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.